ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಆಘಾತ ನೀಡಿದೆ.
ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವ ಪ್ರಸ್ತಾಪ ಇಲ್ಲ ಎಂದು ಸರ್ಕಾರ ವಿಧಾನಸಭೆಯಲ್ಲಿ ಲಿಖಿತ ಉತ್ತರ ನೀಡಿದೆ.
ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಎಂ ಕೇಳಿದ್ದ ಪ್ರಶ್ನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲಿಖಿತ ಉತ್ತರ ನೀಡಿದ್ದಾರೆ.
2006ರಲ್ಲಿ ರಾಜ್ಯದಲ್ಲಿ ಜಾರಿಯಾದ ರಾಷ್ಟ್ರೀಯ ಪಿಂಚಣಿ ಯೋಜನೆಯಿಂದಾಗಿ ರಾಜ್ಯ ಸರ್ಕಾರದ ನೌಕರರು ಮತ್ತು ಅವಲಂಬಿತ ಕುಟುಂಬದ ಸದಸ್ಯರು ನೌಕರರ ನಿವೃತ್ತಿ, ಮರಣ ಸಂದರ್ಭದಲ್ಲಿ ಕನಿಷ್ಠ ಆರ್ಥಿಕ ಭದ್ರತೆಯೂ ಇಲ್ಲದೇ ಪಡೆಯುತ್ತಿರುವ ಪಿಂಚಣಿಯಿಂದಾಗಿ ಅವಸ್ಥೆಯಾಗಿರುವುದು ಸರ್ಕಾರದ ಗಮನಕ್ಕೆ ಬಂದಿದ್ಯಾ..?
ಮುಖ್ಯಮಂತ್ರಿಗಳ ಉತ್ತರ: ಇಲ್ಲ. ಅಂದರೆ ಸರ್ಕಾರ ರಾಷ್ಟ್ರೀಯ ಪಿಂಚಣಿ ಯೋಜನೆಯಿಂದಾಗಿ ನೌಕರರು ಮತ್ತು ಅವರ ಕುಟುಂಬ ಸದಸ್ಯರಿಗೆ ಆಗುತ್ತಿರುವ ಅವ್ಯವಸ್ಥೆ ಬಗ್ಗೆ ಗಮನಕ್ಕೆ ಬಂದಿಲ್ಲ ಎಂದು ಹೇಳಿದೆ.
ಹಳೆಯ ಪಿಂಚಣಿ ಯೋಜನೆಗೆ ಹೋಲಿಸಿದರೆ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಆಗಿರುವ ತಾರತಮ್ಯದ ಬಗ್ಗೆಯೂ ಮಾಹಿತಿ ಇಲ್ಲ ಎಂದು ಸರ್ಕಾರ ಹೇಳಿದೆ.
ಈ ತಾರತಮ್ಯ ತೊಡೆದು ಹಾಕಿ ಹಳೆ ಪಿಂಚಣಿಯನ್ನು ಯಾವಾಗ ಪ್ರಾರಂಭಿಸಲಾಗುವುದು..? ಈ ಬಗ್ಗೆ ಸರ್ಕಾರದ ನಡೆ ಏನು ಎಂಬ ಪ್ರಶ್ನೆಗೆ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರುವ ಪ್ರಸ್ತಾಪ ಸರ್ಕಾರದ ಮುಂದಿರುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ರಾಜ್ಯದಲ್ಲಿರುವ 2 ಲಕ್ಷದ 24 ಸಾವಿರಕ್ಕೂ ಅಧಿಕ ಸರ್ಕಾರಿ ನೌಕರರಿದ್ದಾರೆ. ಹಳೆ ಪಿಂಚಣಿ ಯೋಜನೆಯನ್ನೇ ಜಾರಿಗೊಳಿಸುವಂತೆ ಆಗ್ರಹಿಸಿ ಸೋಮವಾರದಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸರ್ಕಾರಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ.
ಹಿಮಾಚಲಪ್ರದೇಶದಲ್ಲಿ ಆಡಳಿತ ಪಕ್ಷವಾಗಿದ್ದ ಬಿಜೆಪಿಯ ಸೋಲಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಗೆ ನೌಕರರು ವಿರೋಧ ವ್ಯಕ್ತಪಡಿಸಿದ್ದೂ ಪ್ರಮುಖ ಕಾರಣವಾಗಿತ್ತು.
ADVERTISEMENT
ADVERTISEMENT