ದೇವಸ್ಥಾನಗಳಲ್ಲಿ ಹಿರಿಯ ನಾಗರಿಕರಿಗೆ ಇನ್ಮುಂದೆ ನೇರ ಪ್ರವೇಶ, ಕ್ಯೂ ನಿಲ್ಲಬೇಕಿಲ್ಲ

65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಇನ್ಮುಂದೆ ದೇವಸ್ಥಾನಗಳಲ್ಲಿ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ.

ಹಿರಿಯ ನಾಗರಿಕರಿಗೆ ದೇವಸ್ಥಾನಗಳಲ್ಲಿ ನೇರವಾಗಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಮುಜರಾಯಿ ಸಚಿವರೂ ಆಗಿರುವ ರಾಮಲಿಂಗಾ ರೆಡ್ಡಿ ಅವರು ಹೇಳಿದ್ದಾರೆ.

ಮುಜರಾಯಿ ಇಲಾಖೆಗೆ ಒಳಪಟ್ಟ ದೇವಸ್ಥಾನಗಳಲ್ಲಿ ಹಿರಿಯ ನಾಗರಿಕರಿಗೆ ನೇರವಾಗಿ ದರ್ಶನ ಪಡೆಯಲು ಅವಕಾಶವಾಗುವಂತೆ ಪ್ರವೇಶ ವ್ಯವಸ್ಥೆ ಮಾಡಲಾಗುತ್ತದೆ. ಇದಕ್ಕಾಗಿಯೇ ಹಿರಿಯ ನಾಗರಿಕರಿಗೆ ಪ್ರತ್ಯೇಕ ಸರತಿ ಸಾಲಿನ ವ್ಯವಸ್ಥೆ ಮಾಡಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ದರ್ಶನಕ್ಕಾಗಿ ಆನ್​ಲೈನ್​ನಲ್ಲಿ ಬುಕ್​ ಮಾಡುವ ವೇಳೆಯೂ ಹಿರಿಯ ನಾಗರಿಕರಿಗೆ ವಸತಿ ವ್ಯವಸ್ಥೆಯಲ್ಲಿ ರಿಯಾಯಿತಿ ನೀಡಲು ಸೂಚಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.