ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 18 ವರ್ಷದ ಹಿಂದು ಯುವತಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಸಿಂಧ್ ಪ್ರಾಂತ್ಯದ ಸುಕ್ಕೂರು ಪಕ್ಕಷದ ರೋಹಿ ನಗರದ ದಾರಿ ಮಧ್ಯೆ ಪೂಜಾ ಓಡ್ ಎನ್ನುವ ಹಿಂದೂ ಯುವತಿಯನ್ನು ಕಿಡ್ನಾಪ್ ಮಾಡಲು ಸಾಧ್ಯವಾಗದೇ ಇದ್ದಾಗ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪ್ರೈಡೆ ಟೈಮ್ಸ್ ಪತ್ರಿಕೆ ವರದಿ ಮಾಡಿದೆ.
ಪಾಕಿಸ್ತಾನದಲ್ಲಿ ಈ ತರಹದ ಘಟನೆಗಳು ಆಗಾಗ ನಡೆಯುತ್ತಲೇ ಇರುತ್ತವೆ. ಪಾಕಿಸ್ತಾನದಲ್ಲಿ ಪ್ರತಿವರ್ಷ ನೂರಕ್ಕೂ ಹೆಚ್ಚಿನ ಹಿಂದೂ ಹಾಗೂ ಕ್ರಿಶ್ಚಿಯನ್ ಯುವತಿಯರನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳಿಸಲಾಗುತ್ತದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರೊಬ್ಬರು ಹೇಳಿದ್ದಾರೆ.
ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಮಹಿಳೆಯರನ್ನು ನಿರಂತರವಾಗಿ ಅಪಹರಿಸಿ ಬಲವಂತದಿಂದ ಮತಾಂತರ ಮಾಡಲಾಗುತ್ತದೆ. ಬಲವಂತದ ವಿವಾಹಗಳು ಮತ್ತು ಮತಾಂತರದ ಸಮಸ್ಯೆಯನ್ನು ಪಾಕಿಸ್ತಾನದಲ್ಲಿನ ಅಲ್ಪಸಂಖ್ಯಾತ ಸಮುದಾಯಗಳು ಬಹಳ ಹಿಂದಿನಿಂದಲೂ ಎದುರಿಸುತ್ತಿವೆ ಎಂದು ಮಾನವ ಹಕ್ಕುಗಳ ಸಂಸ್ಥೆ ಹೇಳಿದೆ.
ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧ ಹೆಚ್ಚುತ್ತಿರುವ ಅಪರಾಧಗಳ ಬಗ್ಗೆ ಪಾಕಿಸ್ತಾನ ಸರ್ಕಾರವು ಯಾವುದೇ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಬಹು ಹಕ್ಕುಗಳ ಸಂಘಟನೆಗಳು ಆರೋಪಿಸಿವೆ.
ಪಾಕಿಸ್ತಾನದ ಅಂಕಿ ಅಂಶಗಳ ಬ್ಯೂರೋ ಪ್ರಕಾರ, ಪಾಕಿಸ್ತಾನದಲ್ಲಿ ಹಿಂದೂ ಸಮುದಾಯದ ಒಟ್ಟಾರೆ ಜನಸಂಖ್ಯೆಯು 1.60 ಶೇ. ಮತ್ತು ಸಿಂಧ್ನಲ್ಲಿ 6.51 ಶೇ. ರಷ್ಟು ಇದ್ದಾರೆ.