ಪಾಕಿಸ್ತಾನದ ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್(ಐಎಸ್ಐ) ಭಾರತದ ಪಂಜಾಬ್ ಹಾಗೂ ಸುತ್ತಮುತ್ತಲಿನ ರೈಲು ಹಳಿಗಳನ್ನು ವಿಶೇಷವಾಗಿ ಸರಕು ಸಾಗಣೆ ರೈಲುಗಳ ಹಳಿಗಳನ್ನು ಧ್ವಂಸಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಭಾರತದ ಗುಪ್ತಚರ ಇಲಾಖೆ ಎಚ್ಚರಿಸಿದೆ.
ಪಂಜಾಬ್ ಹಾಗೂ ಅದರ ಸುತ್ತಮುತ್ತಲಿನ ರಾಜ್ಯಗಳಲ್ಲಿ ರೈಲ್ವೇ ಹಳಿಯನ್ನು ಗುರಿಯಾಗಿಸಿಕೊಂಡಿರುವ ಪಾಕಿಸ್ತಾನದ ಐಎಸ್ಐ ದೊಡ್ಡ ಸಂಚೊಂದನ್ನು ರೂಪಿಸಿದೆ. ರೈಲ್ವೇ ಹಳಿಗಳನ್ನು ಸ್ಫೋಟಿಸಲು ಐಎಸ್ಐ ಯೋಜನೆ ರೂಪಿಸಿದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ.
ರೈಲ್ವೇ ಹಳಿಗಳನ್ನು ಗುರಿಯಾಗಿಸಿಕೊಂಡಿರುವ ಐಎಸ್ಐ ಭಾರತದಲ್ಲಿ ತನ್ನ ಕಾರ್ಯಕರ್ತರಿಗೆ ಭಾರೀ ಪ್ರಮಾಣದ ಹಣ ನೀಡುತ್ತಿದೆ. ಭಾರತದಲ್ಲಿರುವ ಪಾಕಿಸ್ತಾನದ ಸ್ಲೀಪರ್ ಸೆಲ್ಗಳಿಗೆ ಭಯೋತ್ಪಾದನಾ ಚಟುವಟಿಕೆ ನಡೆಸಲು ಭಾರೀ ಮೊತ್ತದ ಹಣ ನೀಡಲಾಗುತ್ತಿದೆ ಎಂದಿದೆ