No Result
View All Result
ಹಾಸ್ಯ ಕಲಾವಿದ ಸಂಜು ಬಸಯ್ಯ ಅವರು ಪಲ್ಲವಿ ಬಳ್ಳಾರಿ ಎನ್ನುವವರನ್ನು ಮದುವೆಯಾಗಿದ್ದಾರೆ.
ಝೀ ಕಾಮಿಡಿ ಶೋಗಳ ಮೂಲಕ ಮನೆಮಾತಾಗಿದ್ದ ಸಂಜು ಬಸಯ್ಯ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ.
ಕನ್ನಡದ ಕಲಾಭಿಮಾನಿಗಳಿಗೆ ನಿಮ್ಮ ಪ್ರೀತಿಯ ಸಂಜು ಬಸಯ್ಯ ಮತ್ತು ಪಲ್ಲವಿ ಬಳ್ಳಾರಿ ಮಾಡುವ ಅನಂತ ಕೋಟಿ ನಮಸ್ಕಾರಗಳು
ಇಲ್ಲಿಯವರೆಗಿನ ನನ್ನ ಹಾಗೂ ಪಲ್ಲವಿ ಬಳ್ಳಾರಿಯವರ ನಡುವಿನ ಸಂಬಂಧಗಳ ಊಹಾಪೋಹಗಳಿಗೆ ಇಂದು ನಾವು ತೆರೆ ಎಳೆದಿದ್ದೆವೆ. ಮೊದಲಿಗೆ ನಮ್ಮಿಬ್ಬರ ಪರಿಚಯವಾಗಿತು ,ಆ ಪರಿಚಯ ಸ್ನೇಹವಾಗಿ , ಸ್ನೇಹ ಪ್ರೀತಿಯಾಗಿದ್ದು ನಿಮಗೆಲ್ಲರಿಗೂ ಗೊತ್ತಿದ್ದ ವಿಷಯ.
ಈಗ ನಾವಿಬ್ಬರು ಕಾನೂನಬದ್ದವಾಗಿ ,ಅಧಿಕೃತವಾಗಿ ,ರಿಜಿಸ್ಟರ್ ಮ್ಯಾರೇಜ್ ಆಗಿದ್ದೇವೆ. ನಮ್ಮ ,ನಮ್ಮ ಕುಟುಂಬದ ಒಪ್ಪಿಗೆ ಪಡೆದು ನಿಮ್ಮೆಲ್ಲರ ಸುಮ್ಮುಖದಲ್ಲಿ ಆದಷ್ಟು ಬೇಗ ಸಪ್ತಪದಿ ತುಳಿಯಲಿದ್ದೇವೆ.
ನಿಮ್ಮ ಪ್ರೀತಿ ,ಆಶೀರ್ವಾದ ನಮ್ಮ ಮೇಲೆ ಹೀಗೆ ಇರ್ಲಿ ನಿಜವಾದ ಪ್ರೀತಿಗೆ ಯಾವುದೇ ಜಾತಿ,ಧರ್ಮ ,ಇನ್ನಿತರ ಯಾವುದೇ ವಿಷಯಗಳು ಅಡ್ಡ ಬರಲಾರದು ಎಂಬುದನ್ನು ಸಾಧಿಸಿ ತೋರಿಸಿದ್ದೇವೆ, ನಿಜವಾದ ಪ್ರೀತಿಗೆ ಜಯ ಸಿಕ್ಕೆ ಸಿಗುತ್ತದೆ ಎನ್ನುವುದಕ್ಕೆ ನಾವೇ ಕಾರಣ
ಇಂತಿ ನಿಮ್ಮ ಪ್ರೀತಿಯ
ಸಂಜು ಬಸಯ್ಯ , ಪಲ್ಲವಿ ಬಳ್ಳಾರಿ
ಎಂದು ಸಂಜು ಬಸಯ್ಯ ಬರೆದುಕೊಂಡಿದ್ದಾರೆ.
No Result
View All Result
error: Content is protected !!