ಪಂಚಮಸಾಲಿ ಮೀಸಲಾತಿ : ಸರ್ಕಾರ ನೇಮಿಸಿದ ಸಮಿತಿಗೆ ಹೈಕೋರ್ಟ್ ತಡೆ

Reservation

ವೀರಶೈವ-ಲಿಂಗಾಯತ ಪಂಚಮಸಾಲಿ ಉಪ ಪಂಗಡವನ್ನು 2ಎ ಗೆ ಸೇರ್ಪಡೆ ಮಾಡುವ ವಿಚಾರದಲ್ಲಿ ( Panchamasali Reservation ) ಮುಂದಿನ ಆದೇಶದವರೆಗೆ ಮುಂದುವರಿಯದಂತೆ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಬಿ ಆಡಿ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಕಾನೂನಿಗೆ ವಿರುದ್ಧವಾಗಿ ಉನ್ನತ ಮಟ್ಟದ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ, ಇದಕ್ಕೆ ನಿರ್ಬಂಧ ವಿಧಿಸಬೇಕು ಎಂದು ಕೋರಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವೆಂಕಟರಾಮಯ್ಯ ಅವರು ಸಲ್ಲಿಸಿರುವ ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಬಿ ವೀರಪ್ಪ ಮತ್ತು ಕೆ ಎಸ್‌ ಹೇಮಲೇಖಾ ಅವರಿದ್ದ ವಿಭಾಗೀಯ ಪೀಠ ನಡೆಸಿತು.

ಇದನ್ನೂ ಓದಿ : ಮೀಸಲಾತಿ ನೀಡದಿದ್ದರೆ, ರಾಜೀನಾಮೆ ಕೊಡಲಿ: ಸಿಎಂ ವಿರುದ್ಧ ಜಯ ಮೃತ್ಯುಂಜಯ ಸ್ವಾಮೀಜಿ ಕೆಂಡ

ಮುಂದಿನ ವಿಚಾರಣೆಯನ್ನು ನ್ಯಾಯಪೀಠ ಆಗಸ್ಟ್‌ 24ಕ್ಕೆ ಮುಂದೂಡಿದೆ.

ಪಂಚಮಸಾಲಿ( Panchamasali Reservation ) ಉಪ ಪಂಗಡವನ್ನು 3ಬಿ ವಿಭಾಗದಿಂದ 2ಎ ವ್ಯಾಪ್ತಿಗೆ ಸೇರ್ಪಡೆ ಮಾಡಬೇಕೆಂಬ ಬೇಡಿಕೆಯನ್ನು ಪರಿಶೀಲಿಸಿ ವರದಿ ಸಲ್ಲಿಸಲು ನ್ಯಾಯಮೂರ್ತಿ ಸುಭಾಷ್ ಆಡಿ ನೇತೃತ್ವದ ಉನ್ನತ ಮಟ್ಟದ ಸಮಿತಿ ರಚಿಸಿ ರಾಜ್ಯ ಸರ್ಕಾರವು 2021ರ ಜುಲೈ 1ರಂದು ಆದೇಶ ಹೊರಡಿಸಿದೆ.

LEAVE A REPLY

Please enter your comment!
Please enter your name here