ಸುಪ್ರೀಂಕೋರ್ಟ್ ಆದೇಶಗಳನ್ನು ಧಿಕ್ಕರಿಸಿ ವರ್ತಿಸಿದ್ದ ಪತಂಜಲಿ ಸಂಸ್ಥಾಪಕ ಯೋಗ ಗುರು ಬಾಬಾ ರಾಮದೇವ್ ಮತ್ತು ಪತಂಜಲಿ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರು ಸುಪ್ರೀಂಕೋರ್ಟ್ನ ಬೇಷರತ್ ಕ್ಷಮೆಯಾಚಿಸಿದ್ದಾರೆ. ಭವಿಷ್ಯದಲ್ಲಿ ಅಂತಹ ಜಾಹೀರಾತನ್ನು ಪ್ರಕಟಿಸುವುದಿಲ್ಲ ಎಂದು ಸುಪ್ರೀಂಕೋರ್ಟ್ಗೆ ವಾಗ್ದಾನ ಮಾಡಿದ್ದಾರೆ.
ಎರಡು ದಿನಗಳ ಹಿಂದೆಯಷ್ಟೇ ನ್ಯಾಯಮೂರ್ತಿ ಹಿಮಾ ಕೊಹ್ಲಿ ಮತ್ತು ನ್ಯಾಯಮೂರ್ತಿ ಅಸಾದುದ್ದೀನ್ ಅಮಾನುಲ್ಲಾ ಅವರ ಪೀಠ ಮುಂದಿನ ವಿಚಾರಣೆ ವೇಳೆ ಖುದ್ದು ಹಾಜರಾಗುವಂತೆ ರಾಮ್ದೇವ್ ಮತ್ತು ಆಚಾರ್ಯ ಬಾಲಕೃಷ್ಣಗೆ ಸೂಚಿಸಿತ್ತು.
ಭಾರತೀಯ ವೈದ್ಯಕೀಯ ಸಂಘ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್ ಪತಂಜಲಿ ಆರ್ಯುವೇದಿಕ್ ಉತ್ಪನ್ನಗಳ ಬಗ್ಗೆ ಜಾಹೀರಾತು ನೀಡದಂತೆ ಪತಂಜಲಿ ಕಂಪನಿಗೆ ಸೂಚಿಸಿತ್ತು. ಆದರೆ ಸುಪ್ರೀಂಕೋರ್ಟ್ ಆದೇಶದ ಹೊರತಾಗಿಯೂ ಜಾಹೀರಾತು ಮುಂದುವರೆಸಿತ್ತು. ಸುಪ್ರೀಂಕೋರ್ಟ್ ಆದೇಶ ಉಲ್ಲಂಘನೆ ಹಿನ್ನೆಲೆಯಲ್ಲಿ ಯಾಕೆ ನ್ಯಾಯಾಂಗ ನಿಂದನೆ ಆರೋಪದಡಿ ಕ್ರಮಕೈಗೊಳ್ಳಬಾರದು ಎಂದು ನ್ಯಾಯಾಲಯ ನೋಟಿಸ್ ಜಾರಿ ಮಾಡಿತ್ತು ಮತ್ತು ಆ ಸಂಬಂಧ ಉತ್ತರ ಸಲ್ಲಿಸುವಂತೆ ಸೂಚಿಸಿತ್ತು.
ಆದರೆ ಆ ನೋಟಿಸ್ಗೂ ಯೋಗ ಗುರು ಬಾಬಾ ರಾಮ್ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಉತ್ತರ ಸಲ್ಲಿಸಿರಲಿಲ್ಲ. ಈ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ ಮುಂದಿನ ವಿಚಾರಣೆ ವೇಳೆ ಇಬ್ಬರಿಗೂ ಖುದ್ದು ಹಾಜರಾಗುವಂತೆ ಮಾರ್ಚ್ 19ರಂದು ಆದೇಶ ನೀಡಿತ್ತು.
ಆರೋಗ್ಯಕರ ಜೀವನಕ್ಕಾಗಿ ಆರ್ಯವೇದದ ಸಂಶೋಧನೆಯಿಂದ ತಯಾರಿಸಲಾದ ಪತಂಜಲಿ ಆರ್ಯುವೇದ ಉತ್ಪನ್ನಗಳನ್ನು ಸೇವಿಸುವಂತೆ ದೇಶದ ಜನರಲ್ಲಿ ನಾವು ಅರಿವು ಮೂಡಿಸುತ್ತಿದ್ದೇವೆಯಷ್ಟೇ
ಎಂದು ಸುಪ್ರೀಂಕೋರ್ಟ್ಗೆ ಸಲ್ಲಿಸಿರುವ ಕ್ಷಮಾ ಅರ್ಜಿಯಲ್ಲಿ ಬಾಬಾ ರಾಮ್ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಹೇಳಿಕೊಂಡಿದ್ದಾರೆ.