Paycm Poster Row : ಪೇಸಿಎಂ ಪೋಸ್ಟರ್ ವಿವಾದಕ್ಕೆ ತಿರುವು; ಎಫ್​ಐಆರ್​​ ಹಾಕಲು ಸಿಎಂ ಸೂಚನೆ

Paycm Poster Row

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮುಖವನ್ನು ಹೊಂದಿರುವ ‘ಪೇಸಿಎಂ’ ಪೋಸ್ಟರ್‌ಗಳನ್ನು (Paycm Poster Row) ನಗರದ ಹಲವು ಕಡೆ ಅಂಟಿಸಲಾಗಿದೆ. ಇದರ ವಿರುದ್ಧ ತೀವ್ರ ಆಕ್ರೋಶಗೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಇದರ ಹಿಂದೆ ಇರುವವರ ವಿರುದ್ಧ ಕೇಸ್ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯ ನೀಡಿರುವ ಮುಖ್ಯಮಂತ್ರಿ ಬೊಮ್ಮಾಯಿಯವರು, ಆಧಾರ ರಹಿತವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಋಣಾತ್ಮಕ ಪ್ರಚಾರ ಮಾಡುತ್ತಿದ್ದಾರೆ. ನನ್ನ ಹಾಗೂ ರಾಜ್ಯದ ಹೆಸರನ್ನು ಕೆಡಿಸಲು ಇಂತಹ ವ್ಯವಸ್ಥಿತ ಷಡ್ಯಂತ್ರಗಳು ನಡೆಯುತ್ತಿವೆ. ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ತಿಳಿಯಲು ಪ್ರಕರಣ ದಾಖಲಿಸಿ, ಸಮಗ್ರ ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ಸಿಎಂ ಸೂಚನೆ ಬೆನ್ನಲ್ಲೇ, ಪೇಸಿಎಂ ಪೋಸ್ಟರ್ (Paycm Poster Row) ಅಂಟಿಸಿದವರ ಪತ್ತೆಗೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಕೇಂದ್ರ ವಿಭಾಗದ ಪೊಲೀಸರು ಈಗಾಗಲೇ ಸಾರ್ವಜನಿಕ ಸ್ಥಳಗಳ ವಿರೂಪ ಕಾಯಿದೆಯಡಿ ಒಂದು ಪ್ರಕರಣ ದಾಖಲಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸಿ.ಎಚ್.ಪ್ರತಾಪ್ ರೆಡ್ಡಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ : Paycm Poster : ಪೇಟಿಎಂ ಮಾದರಿಯಲ್ಲಿ ಪೇಸಿಎಂ ಪೋಸ್ಟರ್ ಅಂಟಿಸಿ ವಿನೂತನ ಪ್ರತಿಭಟನೆ

ಎಲ್ಲಾ ಡಿಸಿಪಿಗಳು ತಮ್ಮ ವಿಭಾಗಗಳಲ್ಲಿ ಇಂತಹ ಪೋಸ್ಟರ್ ಗಳನ್ನು ಪರಿಶೀಲಿಸಿ ಪ್ರಕರಣ ದಾಖಲಿಸುವಂತೆ ಆಯುಕ್ತರು ಸೂಚನೆ ನೀಡಿದ್ದಾರೆ. ಪೋಸ್ಟರ್‌ಗಳಿಗೆ ಸಂಬಂಧಿಸಿದಂತೆ ಹೈಗ್ರೌಂಡ್ಸ್ ಪೊಲೀಸರು ಒಂದು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಮತ್ತು ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತರು(ಡಿಸಿಪಿ) ಈ ವಿಷಯವನ್ನು ಖುದ್ದಾಗಿ ಪರಿಶೀಲಿಸುತ್ತಿದ್ದಾರೆ.

ಪೋಸ್ಟರ್‌ಗಳನ್ನು ಬಸ್ ನಿಲ್ದಾಣಗಳಲ್ಲಿ ಮತ್ತು ನಿರ್ಮಾಣ ಸ್ಥಳದಲ್ಲಿ ಅಂಟಿಸಲಾಗಿತ್ತು. ಮೇಖ್ರಿ ವೃತ್ತ, ಅರಮನೆ ರಸ್ತೆ, ಬಾಳೇಕುಂದ್ರಿ ವೃತ್ತ ಮತ್ತಿತರ ಕಡೆ ಹಾಕಲಾಗಿದ್ದ, ಬಹುತೇಕ ಪೋಸ್ಟರ್‌ಗಳನ್ನು ಪೌರಕಾರ್ಮಿಕರು ಹಾಗೂ ಪೊಲೀಸರು ಈಗಾಗಲೇ ತೆರವುಗೊಳಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರು ಕೆರೆ ಒತ್ತುವರಿ ತನಿಖೆಗೆ ಆಯೋಗ : ಸಿಎಂ ಬೊಮ್ಮಾಯಿ ಘೋಷಣೆ

LEAVE A REPLY

Please enter your comment!
Please enter your name here