Paycm ಪೋಸ್ಟರ್​​​ನ್ನು ಸರ್ಕಾರಿ ಕಚೇರಿಗಳಲ್ಲಿ ಅಂಟಿಸ್ತೀವಿ – ಡಿಕೆ ಶಿವಕುಮಾರ್

Paycm ಪೋಸ್ಟರ್

ಮುಖ್ಯಮಂತ್ರಿಗಳು Paycm ಪೋಸ್ಟರ್ ವಿಚಾರಕ್ಕೆ ಇಷ್ಟು ತಲೆ ಕೆಡಿಸಿಕೊಂಡು ಗಾಬರಿಯಾಗಿರುವುದು ಏಕೆ? Paycm ಪೋಸ್ಟರ್ ಅಂಟಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುವುದು ಏಕೆ? ನಾಳೆ ನಮ್ಮ ಎಲ್ಲಾ ಶಾಸಕರು ಸೇರಿ ಪೇ ಸಿಎಂ ಪೋಸ್ಟರ್ ಅನ್ನು ಸರ್ಕಾರಿ ಕಚೇರಿಗಳಲ್ಲಿ ಅಂಟಿಸುತ್ತೇವೆ. ಎಲ್ಲಿ ಅಂಟಿಸುತ್ತೇವೆ ಎಂದು ಮುಂದೆ ತಿಳಿಸುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬಿಜೆಪಿ ಅವರು ನಮ್ಮ ಬಗ್ಗೆಯೂ ಕ್ಯೂಆರ್ ಕೋಡ್ ಹಾಕಿದ್ದಾರೆ. ನಾನು ವಿಚಾರಣೆಗೆ ಹೋದ ಸಮಯದಲ್ಲಿ ನಾನು ಕಂಬಿ ಹಿಂದೆ ಇರುವಂತೆ ಮಾಧ್ಯಮಗಳು ಫೋಟೋ ಹಾಕಿದ್ದರು. ಹಾಗೆಂದು ನಾನು ಅವರ ವಿರುದ್ಧ ದೂರು ನೀಡಲು ಸಾಧ್ಯವೇ?

ರಾಜಕೀಯದಲ್ಲಿ ಇರುವವರನ್ನು ಜನ ಪ್ರಶ್ನಿಸುವುದು, ಟೀಕಿಸುವುದು ಸಹಜ. ಅಧಿಕಾರದಲ್ಲಿ ಇರುವವರು ಇದನ್ನು ಜೀರ್ಣಿಸಿಕೊಳ್ಳಬೇಕು.

ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾಧ್ಯಮಗಳು ವರದಿ ಮಾಡಿವೆ. ಗುತ್ತಿಗೆದಾರರು ಆರೋಪ ಮಾಡಿದ್ದಾರೆ. ನಮ್ಮ ಅಭಿಯಾನದಲ್ಲಿ 8 ಸಾವಿರಕ್ಕೂ ಹೆಚ್ಚು ಮಂದಿ, ನಾವು ಭ್ರಷ್ಟಾಚಾರಕ್ಕೆ ಬಲಿಯಾಗಿದ್ದೇವೆ ಎಂದು ತಿಳಿಸಿದ್ದಾರೆ. ಹೀಗಾಗಿ ಪಕ್ಷದ ವತಿಯಿಂದ ನಾವೇ ಟೋಲ್ ಸಂಖ್ಯೆ ನೀಡಿ ನೋಂದಣಿ ಮಾಡಿಕೊಳ್ಳಲು ಹೇಳಿದ್ದೆವು.

ಇದನ್ನೂ ಓದಿ : Paycm Poster : ಪೇಟಿಎಂ ಮಾದರಿಯಲ್ಲಿ ಪೇಸಿಎಂ ಪೋಸ್ಟರ್ ಅಂಟಿಸಿ ವಿನೂತನ ಪ್ರತಿಭಟನೆ

ನಾವು ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದು, ಬಿಜೆಪಿ ಅವರು ನಮ್ಮ ಬಗ್ಗೆಯೂ ಹಾಕಿದ್ದಾರೆ. ಇದು ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರವಾಗಿದ್ದು, ರಾಜ್ಯವನ್ನು ದೇಶದ ಭ್ರಷ್ಟಾಚಾರದ ರಾಜಧಾನಿಯನ್ನಾಗಿ ಮಾಡಿದ್ದಾರೆ. ಈ ಸರ್ಕಾರದ ಭ್ರಷ್ಟಾಚಾರ ಬಯಲು ಮಾಡುವುದು ನಮ್ಮ ಕರ್ತವ್ಯ ಅದನ್ನು ಮಾಡುತ್ತೇವೆ.

ಬಿಜೆಪಿ ಅವರು ನಮ್ಮ ವಿರುದ್ಧ ಇಂತಹ ನೂರಾರು ಪೋಸ್ಟರ್ ಮಾಡಿದ್ದು, ಅವರ ವಿರುದ್ಧ ಕ್ರಮ ಕೈಗೊಂಡಿಲ್ಲ.

ಇದು ಅಧಿಕಾರ ದುರ್ಬಳಕೆ, ಭಯ, ದ್ವೇಷದ ರಾಜಕಾರಣವಾಗಿದೆ. 40% ಕಮಿಷನ್ ಆರೋಪ ನಾವು ಮಾಡಿದ್ದೇವಾ? ಸಿಎಂ ಹುದ್ದೆಗೆ 2500 ಕೋಟಿ ನೀಡಬೇಕು ಎಂದು ನಾವು ಹೇಳಿದ್ದೇವಾ? ನಿಮ್ಮ ಶಾಸಕ ಯತ್ನಾಳ್ ಅವರೇ ಹೇಳಿದ್ದಾರೆ. ಹಗರಣದ ಬಗ್ಗೆ ಮಾತನಾಡಿದ ನಮ್ಮ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಸಮನ್ಸ್ ನೀಡುವ ಸರ್ಕಾರ ಯತ್ನಾಳ್, ವಿಶ್ವನಾಥ್, ಮಠದ ಸ್ವಾಮೀಜಿಗಳಿಗೆ ಸಮನ್ಸ್ ನೀಡಿಲ್ಲ ಯಾಕೆ? ವಿಧಾನಸೌಧದ ಮುಂದೆ ಗುತ್ತಿಗೆದಾರರ ಸಂಘದವರು ಆರೋಪ ಮಾಡಿದಾಗ ಯಾಕೆ ಕೇಸ್ ಹಾಕಲಿಲ್ಲ. ಈ ವಿಚಾರ ಜನರ ಬಾಯಲ್ಲಿ ಹರಿದಾಡುತ್ತಿದೆ. ನೀವು ನಮ್ಮ ಮೇಲೂ ಆರೋಪ ಮಾಡಿದ್ದೀರಿ. ತನಿಖೆ ಮಾಡಿ, ನಾವು ಅದನ್ನು ಸ್ವಾಗತಿಸುತ್ತೇವೆ ಎಂದು ಡಿಕೆ ಶಿವಕುಮಾರ್ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಇದನ್ನೂ ಓದಿ : ನಾಳೆ Paycm Poster ಹಿಡಿದು ಪ್ರತಿಭಟನೆ : ಸಿದ್ದರಾಮಯ್ಯ ಘೋಷಣೆ

LEAVE A REPLY

Please enter your comment!
Please enter your name here