ADVERTISEMENT
ಲೋಕಸಭಾ ಚುನಾವಣೆ ಫಲಿತಾಂಶ ಹೊರಬಿದ್ದ ಎರಡೇ ದಿನದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾಗಿದೆ.
ಅಸ್ಸಾಂನಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಏರಿಕೆ ಮಾಡಿದೆ.
ಪೆಟ್ರೋಲ್ ಮೇಲಿನ ವ್ಯಾಟ್ ತೆರಿಗೆಯನ್ನು 1 ರೂಪಾಯಿ 1 ಪೈಸೆ ಮತ್ತು ಡೀಸೆಲ್ ಮೇಲಿನ ವ್ಯಾಟ್ ತೆರಿಗೆಯನ್ನು 1 ರೂಪಾಯಿ 10 ಪೈಸೆಯಷ್ಟು ಹೆಚ್ಚಳ ಮಾಡಲಾಗಿದೆ.
ಪಶ್ಚಿಮ ಬಂಗಾಳಕ್ಕೆ ಹೋಲಿಸಿದ್ರೆ ಅಸ್ಸಾಂನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆ ಇರುವುದರಿಂದ ಬೆಲೆ ಹೆಚ್ಚಳ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಹಿಮಂತ್ ಬಿಸ್ವಾಸ್ ಸರ್ಮಾ ಹೇಳಿದ್ದಾರೆ.
ADVERTISEMENT