ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿದ ಹೊತ್ತಲ್ಲೇ ಜಮ್ಮು-ಕಾಶ್ಮೀರದಲ್ಲಿ ಪ್ರವಾಸಿಗರ ಬಸ್ನ ಮೇಲೆ ಉಗ್ರರು ನಡೆಸಿದ ದಾಳಿಗೆ 9 ಮಂದಿ ಸಾವನ್ನಪ್ಪಿದ್ದಾರೆ.
ರೆಸಾಯ್ನಲ್ಲಿ ಭಯೋತ್ಪಾದಕರ ದಾಳಿ ಬಳಿಕ ಬಸ್ ಕಂದಕಕ್ಕೆ ಉರುಳಿ 9 ಮಂದಿ ಸಾವನ್ನಪ್ಪಿದ್ದಾರೆ.
ಮೂರನೇ ಬಾರಿಗೆ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ದೇಶದಲ್ಲಿ ನಡೆದ ಮೊದಲ ಭಯೋತ್ಪಾದಕ ದಾಳಿಯಾಗಿದೆ. ಅದು ಕೂಡಾ ಮೋದಿ ಸರ್ಕಾರದ ಪ್ರಮಾಣವಚನದಂದೇ ಈ ದಾಳಿ ನಡೆದಿದೆ. ಭಯೋತ್ಪಾದಕರ ದಾಳಿ ಬಗ್ಗೆ ಪ್ರಧಾನಮಂತ್ರಿ ಮಾಹಿತಿ ಪಡೆದಿದ್ದಾರೆ ಎಂದು ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಜನರಲ್ ಪ್ರತಿಕ್ರಿಯಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದಾಳಿಯನ್ನು ಖಂಡಿಸಿದ್ದಾರೆ.
ಮೋದಿ ಮತ್ತು ಎನ್ಡಿಎ ಸರ್ಕಾರದ ಪ್ರಮಾಣವಚನದಂದೇ ಮತ್ತು ಹಲವು ರಾಷ್ಟ್ರಗಳ ಗಣ್ಯರು ಭಾರತಕ್ಕೆ ಭೇಟಿ ನೀಡಿರುವ ದಿನದಂದೇ ಭಯೋತ್ಪಾದಕರ ದಾಳಿ ನಡೆದಿದೆ. ಜಮ್ಮು-ಕಾಶ್ಮೀರದಲ್ಲಿ ಸಹಜ ಸ್ಥಿತಿ ನಿರ್ಮಿಸುವ ಮತ್ತು ಶಾಂತಿ ಸ್ಥಾಪಿಸುವ ಮೋದಿ ಸರ್ಕಾರದ (ಈಗಿನ ಎನ್ಡಿಎ) ಸರ್ಕಾರ ಪ್ರಚಾರಗಳೆಲ್ಲವೂ ಸುಳ್ಳಾಗಿದೆ ಎಂದು ಖರ್ಗೆ ಅವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ADVERTISEMENT
ADVERTISEMENT