ಪ್ರಧಾನಿ ನರೇಂದ್ರ ಮೋದಿಯವರ ಹತ್ಯೆಗೆ ಸಂಚು ರೂಪಿಸಿದ್ದರೆನ್ನಲಾದ ಇಬ್ಬರನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ.
ಜಾರ್ಖಾಂಡ್ನ ನಿವೃತ್ತ ಪೊಲೀಸ್ ಅಧಿಕಾರಿ ಮೊಹಮ್ಮದ್ ಜಲಾವುದ್ದೀನ್ ಮತ್ತು ಆತನ ಪತ್ನಿ ಅಥರ್ ಫರ್ವೇಜ್ ಹಾಗೂ ಮತ್ತೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಜುಲೈ 11ರಂದು ಖಚಿತ ಮಾಹಿತಿ ಮೇರೆಗೆ ಬಿಹಾರದ ನಯಾ ಟೋಲಾ ಪ್ರದೇಶದಲ್ಲಿ ದಾಳಿ ನಡೆಸಿ ಪಾಟ್ನಾ ಪೊಲೀಸರು ಬಂಧಿಸಿದ್ದಾರೆ. ಬಂಧನದ ವೇಳೆ ಶಂಕಿತ ಭಯೋತ್ಪಾದಕರಿಂದ ಪಿಎಫ್ಐ ಕರಪತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜುಲೈ 12 ರ ಬಿಹಾರದ ಪಾಟ್ನಾ ದಾಳಿಯ ವೇಳೆ ಮೋದಿ ಹತ್ಯೆ ಸಂಚು ರೂಪಿಸಲಾಗಿತ್ತು. ಇದಕ್ಕಾಗಿ ಆರೋಪಿಗಳು ಜುಲೈ 6 ಮತ್ತು 7 ರಂದು ಸಭೆ ನಡೆಸಿದ್ದರು. 2047 ರ ವೇಳೆಗೆ ಭಾರತದಲ್ಲಿ ಇಸ್ಲಾಮಿಕ್ ಆಳ್ವಿಕೆ ಜಾರಿ ಮಾಡುವುದು ಈ ತಂಡದ ಗುರಿಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ದಂಪತಿ ಪಾಕಿಸ್ತಾನ, ಬಾಂಗ್ಲಾದೇಶ, ಟರ್ಕಿ ಸೇರಿದಂತೆ ಹಲವು ಇಸ್ಲಾಮಿಕ್ ರಾಷ್ಟ್ರಗಳಿಂದ ದೇಶವಿರೋಧಿ ಅಭಿಯಾನ ನಡೆಸಲು ಹಣ ಪಡೆಯುತ್ತಿದ್ದರು. PFIಯೊಂದಿಗೆ ನಿರಂತರ ಸಂಪರ್ಕ ಹೊಂದಿದ್ದ ಜಲಾವುದ್ದೀನ್ ಈ ಹಿಂದೆ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ (SIMI)ದೊಂದಿಗೆ ಸಂಬಂಧ ಹೊಂದಿದ್ದರು.
2001-02ರಲ್ಲಿ ಸಿಮಿ ಸಂಘಟನೆ ನಿಷೇಧದ ನಂತರ ಬಿಹಾರದಲ್ಲಿ ಹಲವಾರು ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಪರ್ವೇಜ್ ಅವರ ಕಿರಿಯ ಸೋದರ ಜೈಲು ಪಾಲಾಗಿದ್ದರು ಎಂದು ಎಎಸ್ಪಿ ಮನೀಶ್ ಕುಮಾರ್ ತಿಳಿಸಿದ್ದಾರೆ.