ಭಾನುವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿ ನಡೆಯುವ ಸ್ಥಳದಿಂದ ಕೇವಲ 12 ಕಿಮೀ ದೂರದ ಮೈದಾನದಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.
ಜಮ್ಮು ಜಿಲ್ಲೆಯ ಲಾಲಿಯಾನ ಗ್ರಾಮದಲ್ಲಿ ಸ್ಫೋಟ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸ್ಫೋಟದ ಸ್ವರೂಪದ ಬಗ್ಗೆ ತನಿಖೆ ಆರಂಭಿಸಿದ್ದಾರೆ.
ಪ್ರಧಾನಿಯವರ ರ್ಯಾಲಿ ಸ್ಥಳದಿಂದ ಸುಮಾರು 12 ಕಿಲೋಮೀಟರ್ ದೂರದಲ್ಲಿ ಸಂಭವಿಸಿದ ಸ್ಫೋಟವು ಗ್ರಾಮದ ಅನೇಕ ಮನೆಗಳ ಮೇಲೆ ಪರಿಣಾಮ ಬೀರಿದೆ. ವಾಸ್ತವವಾಗಿ, ಇಲ್ಲಿನ ಅನೇಕ ಮನೆಗಳ ಗಾಜಿನ ಕಿಟಕಿಗಳ ಗಾಜುಗಳು ಒಡೆದಿವೆ. ಗ್ರಾಮಸ್ಥರ ಪ್ರಕಾರ, ಸುಮಾರು 4:00 ರಿಂದ 4:30 ರ ವರೆಗೆ ದೊಡ್ಡ ಶಬ್ದ ಕೇಳಿಸಿತು. ಡ್ರೋನ್ ಮೂಲಕ ಎಸೆದ ಬಾಂಬ್ ಇದಾಗಿರಬಹುದು ಎಂದೂ ಹೇಳಲಾಗುತ್ತಿದೆ. ಎಲ್ಲ ವಿವರಗಳನ್ನು ತನಿಖೆ ನಡೆಯುತ್ತಿದ್ದು, ಎಲ್ಲ ವಿವರಗಳನ್ನು ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ
ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದಾರೆ. ಜಮ್ಮು ವಿಭಾಗದ ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯತದಲ್ಲಿ ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಪಂಚಾಯತ್ ರಾಜ್ ದಿನದಂದು ದೇಶಾದ್ಯಂತ ಗ್ರಾಮ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.