ಚುನಾವಣಾ ರಾಜ್ಯಗಳಲ್ಲಿ ಪ್ರಧಾನಿ ಮೋದಿ ಭೇಟಿ ಚುರುಕು: 36 ಗಂಟೆಯಲ್ಲಿ 12 ಕಾರ್ಯಕ್ರಮ

ಈ ವರ್ಷದ ಅಂತ್ಯದಲ್ಲಿ ವಿಧಾನಸಭಾ ಚುನಾವಣೆ ಎದುರಿಸುತ್ತಿರುವ ರಾಜ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡಲಿದ್ದಾರೆ.

36 ಗಂಟೆಗಳಲ್ಲಿ ಪ್ರಧಾನಿ ಮೋದಿಯವರು 4 ರಾಜ್ಯಗಳಲ್ಲಿ 12 ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಜೂನ್​ 7 ಮತ್ತು 8ರಂದು ಪ್ರಧಾನಿ ಮೋದಿಯವರು ತೆಲಂಗಾಣ, ರಾಜಸ್ಥಾನ, ಛತ್ತೀಸ್​ಗಢ ಮತ್ತು ಉತ್ತರಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ.

ಈ ವರ್ಷದ ಅಂತ್ಯಕ್ಕೆ ತೆಲಂಗಾಣ, ರಾಜಸ್ಥಾನ, ಛತ್ತೀಸ್​ಗಢದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ಜುಲೈ 7ರಂದು ಪ್ರಧಾನಿ ಮೋದಿಯವರು ಉತ್ತರಪ್ರದೇಶ ಮತ್ತು ಜುಲೈ 8ರಂದು ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ.

LEAVE A REPLY

Please enter your comment!
Please enter your name here