ಬೆಂಗಳೂರಿಗೆ ಮೋದಿ ಭೇಟಿ ಪರಿಣಾಮಗಳು: KSRTC, BMTC ಬಸ್​ ಸೇವೆ ಸ್ಥಗಿತ, ರೈಲುಗಳ ಸಂಚಾರವೂ ಸ್ಥಗಿತ

Chief Minister Karnataka Basavaraj Bommai welcomes PM Narendra Modi
Chief Minister Karnataka Basavaraj Bommai welcomes PM Narendra Modi
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಈ ನಡುವೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಎರಡು ಗಂಟೆಗಳ ಕಾಲ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣಕ್ಕೆ ಬರುವ ವಾಹನಗಳನ್ನು ಸ್ಥಗಿತಗೊಳಿಸುವಂತೆ ಬೆಂಗಳೂರು ಸಂಚಾರಿ ಪೊಲೀಸರು ಸೂಚಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮೆಜೆಸ್ಟಿಕ್​ ಬಸ್​ ನಿಲ್ದಾಣದಿಂದ ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿ ಬಸ್​ಗಳ ಓಡಾಟ ಸ್ಥಗಿತಗೊಳ್ಳಲಿದೆ.
ಈ ಸಂಬಂಧ ಬೆಂಗಳೂರು ನಗರ ಉಪ್ಪಾರಪೇಟೆ ಪೊಲೀಸರು ಕಾನೂನು ಸುವ್ಯವಸ್ಥೆ ಮತ್ತು ಸಂಚಾರಿ ವಿಭಾಗದ ಪೊಲೀಸರು ಸೂಚನೆ ನೀಡಿದ್ದಾರೆ.
ಇವತ್ತು ಪ್ರಧಾನಿಯವರು ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲು ಉದ್ಘಾಟಿಸಲಿರುವ ಹಿನ್ನೆಲೆಯಲ್ಲಿ 27 ರೈಲುಗಳ ಓಡಾಟ ಭಾಗಶಃ ಅಥವಾ ಸಂಪೂರ್ಣ ರದ್ದಾಗಿದೆ. ಕೆಎಸ್​ಆರ್​ ಬೆಂಗಳೂರು ರೈಲ್ವೆ ನಿಲ್ದಾಣದಿಂದ ಹೊರಡಲಿರುವ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಆಗಲಿದೆ.