ಯಡಿಯೂರಪ್ಪ ಕೊನೆಯ ವಿದಾಯದ ಭಾಷಣ – ಪ್ರಧಾನಿ ಮೋದಿ ಪ್ರತಿಕ್ರಿಯೆ ಏನಿತ್ತು..?

ತಮ್ಮ ರಾಜಕೀಯ ಬದುಕಿನ ಕೊನೆಯ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರು ಮಾಡಿದ ಭಾಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆಯಲ್ಲಿ ಬಜೆಟ್​ ಮೇಲಿನ ಚರ್ಚೆ ಸಂಬಂಧ ಬುಧವಾರ ಯಡಿಯೂರಪ್ಪ ಅವರು ಭಾಷಣ ಮಾಡಿದ್ದರು.

ಯಡಿಯೂರಪ್ಪ ಅವರ ಭಾಷಣವನ್ನು ಬಿಜೆಪಿ ಕರ್ನಾಟಕ ತನ್ನ ಅಧಿಕೃತ ಟ್ವಿಟ್ಟರ್​ ಖಾತೆಯಲ್ಲಿ ಹಂಚಿಕೊಂಡಿತ್ತು.

ಈ ಟ್ವೀಟ್​ಗೆ ಕನ್ನಡದಲ್ಲೇ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು,

ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಈ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎಂದೆನಿಸಿದೆ. ಇದರಲ್ಲಿ ನಮ್ಮ ಪಕ್ಷದ ನೈತಿಕತೆಯೂ ಅಡಕವಾಗಿದೆ. ಇದು ಖಂಡಿತವಾಗಿಯೂ ಇತರ ಕಾರ್ಯಕರ್ತರಿಗೂ ಸ್ಫೂರ್ತಿ ನೀಡುತ್ತದೆ.

ಎಂದು ಪ್ರತಿಕ್ರಿಯಿಸಿದ್ದಾರೆ.

ನಿನ್ನೆಯಷ್ಟೇ ಬಿಜೆಪಿ ರಾಷ್ಟ್ರೀಯ ನಾಯಕ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳುವ ವೇಳೆ

ಒಂದು ಬಾರಿ ಮೋದಿ ಮೇಲೆ ಭರವಸೆ ಇಡಿ, ಒಂದು ಬಾರಿ ಯಡಿಯೂರಪ್ಪ ಅವರ ಮೇಲೆ ಭರವಸೆ ಇಡಿ, ನಾವು ಕರ್ನಾಟಕದಲ್ಲಿ ಎಂತಹ ಸರ್ಕಾರ ನೀಡ್ತೇವೆ ಎಂದರೆ ಐದು ವರ್ಷದಲ್ಲಿ ಕರ್ನಾಟಕವನ್ನು ಭ್ರಷ್ಟಾಚಾರದಿಂದ ಮುಕ್ತ ಮಾಡಲಿದೆ ಮತ್ತು ಕರ್ನಾಟಕದಲ್ಲಿ ದಕ್ಷಿಣ ಭಾರತದಲ್ಲೇ ನಂಬರ್​ ಒನ್​ ರಾಜ್ಯ ಮಾಡಲಿದ್ದೇವೆ

ಎಂದು ಪ್ರಚಾರ ಮಾಡಿದ್ದರು.

LEAVE A REPLY

Please enter your comment!
Please enter your name here