ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಅನಾನುಕೂಲ ಆಗಬಹುದು ಎಂಬ ಹಿನ್ನೆಲೆಯಲ್ಲಿ ಪ್ರಥಮ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ.
ಫೆಬ್ರವರಿ 27ರ ಸೋಮವಾರದಂದು ನಡೆಯಬೇಕಿದ್ದ ಪ್ರಥಮ ಪಿಯುಸಿ ಪರೀಕ್ಷೆಯನ್ನು ಮುಂದೂಡಿ ಬೆಳಗಾವಿ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಆದೇಶ ಹೊರಿಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಫೆಬ್ರವರಿ 27ರಂದು ಬೆಳಗಾವಿ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಥಮ ಪಿಯುಸಿ ಪರೀಕ್ಷೆಗೆ ಹಾಜರಾಗಲಿರುವ ಬೆಳಗಾವಿ ಜಿಲ್ಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಎಲ್ಲ ಸೌಕರ್ಯಗಳಿಂದ ಅನಾನುಕೂಲತೆ ಆಗುವ ಸಾಧ್ಯತೆ ಇರುವುದರಿಂದ ಫೆಬ್ರವರಿ 27ರಂದು ನಡೆಸಬೇಕಿದ್ದ ಪರೀಕ್ಷೆಯನ್ನು ಮಾರ್ಚ್ 6ಕ್ಕೆ ಮುಂದೂಡಲಾಗಿದೆ