ಮೈಸೂರು ಜಿಲ್ಲೆಯ ಟಿ ನರಸೀಪುರದಲ್ಲಿ ಸಂಭವಿಸಿದ ಭೀಕರ ಅಪಘಾತಕ್ಕೆ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಪರಿಹಾರ ಘೋಷಿಸಿದ್ದಾರೆ.
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಾಳುಗಳ ಚಿಕಿತ್ಸೆಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಮೃತರ ಕುಟುಂಬಳಿಗೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ ಅವರು ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.
ADVERTISEMENT
ADVERTISEMENT