ಕನ್ನಡದ ಹಿರಿಯ ಕವಿ, ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ ಎಂದು ಧಾರವಾಡದ ಎಸ್ಡಿಎಂ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ.
ಭಾನುವಾರ ಸಾಯಂಕಾಲ ನೀಡಿರುವ ಆಸ್ಪತ್ರೆಯ ಹೆಲ್ತ್ ಬುಲೆಟಿನ್ ಪ್ರಕಾರ, ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರೆದಿದೆ.
ಕಣವಿಯವರ ಶ್ವಾಸಕೋಶದಲ್ಲಿ ಸೋಂಕಿನ ತೀವ್ರತೆ ಹೆಚ್ಚಾಗಿದೆ. ಎದೆ ಭಾಗದಲ್ಲಿ ಹೆಚ್ಚಿನ ಸೋಂಕು ಹರಡಿರುವ ಕಾರಣ ಉಸಿರಾಡಲು ತೊಂದರೆಯಾಗುತ್ತಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಹೇಳಲಾಗಿದೆ.
ಅಕ್ಯೂಟ್ ರೆಸ್ಪಿರೇಟರಿ ಡಿಸ್ಟ್ರೆಸ್ ಸಿಂಡ್ರೋಮ್ನಿಂದ (ARDS) ಕವಿ ಚೆನ್ನವೀರ ಕಣವಿ ಬಳಲುತ್ತಿದ್ದು, ಕಳೆದ 2 ವಾರದಿಂದ ಎಸ್ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.