ಅಂಚೆ ಇಲಾಖೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಸಿಹಿ ಸುದ್ದಿ. ಏಕೆಂದರೆ ಪೋಸ್ಟ್ ಆಫೀಸ್‌ನಲ್ಲಿನ ಟ್ರೇಡರ್ಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ indiapost.gov.in ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಈ ನೇಮಕಾತಿ ಮೂಲಕ ಒಟ್ಟು 7 ಹುದ್ದೆಗಳನ್ನು ನೇಮಕಾತಿ ಮಾಡಲಾಗುತ್ತಿದ್ದು, ಎಲೆಕ್ಟ್ರಿಷಿಯನ್-1, ಕಾರ್ಪೆಂಟರ್- 1, ಎಂಪಿ ಮೆಕಾನಿಕ್- 2, ಟೈಯರ್ಸ್ಮನ್- 1,ವೆಲ್ಡರ್- 1, ಪೇಂಟರ್- 1, ವಿಭಾಗದಲ್ಲಿ ತಲಾ ಒಂದೊಂದು ಹುದ್ದೆ ಖಾಲಿ ಇದೆ.
ವಿದ್ಯಾರ್ಹತೆ: ಈ ಹುದ್ದೆಗಳಿಗೆ 8ನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಐಟಿಐ ಪ್ರಮಾಣಪತ್ರ ಹೊಂದಿರಬೇಕು. ಹಾಗೆಯೇ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರತಿ ವಿಭಾಗದಲ್ಲಿ ಕನಿಷ್ಠ ಒಂದು ವರ್ಷದ ಅನುಭವವನ್ನು ಹೊಂದಿರಬೇಕೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿದ್ದು, ಎಂಪಿ ಮೆಕಾನಿಕ್ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದರೆ, ಹೆವಿ ಮೋಟಾರು ವಾಹನ ಚಾಲನಾ ಪರವಾನಗಿಯನ್ನು ಹೊಂದಿರುವುದು ಅವಶ್ಯಕ.
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ ವಯೋಮಿತಿ 30 ವರ್ಷಗಳ ಒಳಗಿರಬೇಕು. ಅಂದರೆ 30 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಸರ್ಕಾರಿ ನಿಯಮಗಳ ಪ್ರಕಾರ, ಮೀಸಲಾತಿ ವರ್ಗದವರಿಗೆ ಗರಿಷ್ಠ ವಯೋಮಿತಿಯಲ್ಲಿ ಸ್ವಲ್ಪ ಸಡಿಲಿಕೆ ಇರುತ್ತದೆ.
ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 7ನೇ ವೇತನ ಶ್ರೇಣಿಯ ಆಧಾರದ ಮೇಲೆ ವೇತನ ನೀಡಲಾಗುತ್ತದೆ. ಅದರಂತೆ ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 19,900 ರೂ. ನಿಂದ 63,200 ರೂ.ವರೆಗೆ ವೇತನ ಸಿಗಲಿದೆ. ಅಕ್ಟೋಬರ್ 27, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, The Manager, Mail Motor Service, Goods Shed Road, Coimbatore- 641001, Tamilnadu ಅರ್ಜಿ ಕಳುಹಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು https://drive.google.com/file/d/1dvQ3wbPgXSxyYmN7gq3n9buHC-iT5L2P/view ಇಲ್ಲಿ ಕ್ಲಿಕ್ ಮಾಡಿ.