ADVERTISEMENT
ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಮಾಜಿ ಸಚಿವ ಹೆಚ್ ಡಿ ರೇವಣ್ಣ ಎಸಗಿರುವ ಲೈಂಗಿಕ ದೌರ್ಜನ್ಯ ವಿರುದ್ಧ ದೂರು ನೀಡಲು ಸಹಾಯವಾಣಿ ತೆರೆಯಲಾಗಿದೆ.
ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ.
ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದ್ದು, ಸಂತ್ರಸ್ತರು ಹಾಗೂ ಬಾತ್ಮೀದಾರರಿಗೆ (ಮಾಹಿತಿದಾರರಿಗೆ) ಕಾನೂನು ನೆರವು ಹಾಗೂ ರಕ್ಷಣೆ ನೀಡಲು ಸಹಾಯವಾಣಿ ತೆರೆಯಲಾಗಿದೆ. ಈ ಸಹಾಯವಾಣಿ ಸಂಖ್ಯೆ 6360938947. ಈ ಸಹಾಯವಾಣಿ ಸಂಖ್ಯೆಗೆ ಮಾಹಿತಿದಾರರು ಮತ್ತು ಸಂತ್ರಸ್ತರು ಸಂಪರ್ಕಿಸಬಹುದು.
ಸಂತ್ರಸ್ತರು ಅಥವಾ ಬಾತ್ಮೀದಾರರ ಹೆಸರುಗಳನ್ನು ಗೌಪ್ಯವಾಗಿಡಲಾಗುವುದು ಎಂದು ವಿಶೇಷ ತನಿಖಾ ತಂಡದ ಮುಖ್ಯಸ್ಥರು ತಿಳಿಸಿದ್ದಾರೆ.
ADVERTISEMENT