ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಎನ್ನುವ ಪ್ರಸ್ತಾಪವನ್ನು ಚುನಾವಣಾ ತಂತ್ರಜ್ಞ ‘ಪ್ರಶಾಂತ್ ಕಿಶೋರ್’ ಅವರು ತಿರಸ್ಕರಿಸಿದ್ದಾರೆ.
2024 ರ ಸಾರ್ವತ್ರಿಕ ಚುನಾವಣೆಗೆ ಪಕ್ಷಕ್ಕೆ ಹೊಸ ಮುಖದ ಅವಶ್ಯಕತೆಯಿದೆ ಎಂದು ಕಾಂಗ್ರೆಸ್ ಪಕ್ಷ ಒಪ್ಪಿಕೊಂಡಿದೆ. ಆದಾಗ್ಯೂ, ಪ್ರಶಾಂತ್ ಕಿಶೋರ್ ಅವರಿಗೆ ಮುಕ್ತ ಸ್ವಾತಂತ್ರ್ಯ ನೀಡಲು ಕಾಂಗ್ರೆಸ್ ನಿರಾಕರಿಸಿದೆ. ಆದ್ದರಿಂದ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರ್ಪಡೆ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಶಾಂತ್ ಕಿಶೋರ್ ಅವರು, ಕಾಂಗ್ರೆಸ್ ಪಕ್ಷದ ಸೇರ್ಪಡೆ ಹಾಗೂ ಚುನಾವಣೆಯ ಹೊಣೆಗಾರಿಕೆ ಒಪ್ಪಿಕೊಳ್ಳುವ ಪ್ರಸ್ತಾಪವನ್ನು ನಾನು ತಿರಸ್ಕರಿಸಿದ್ದೇನೆ.
ಕಾಂಗ್ರೆಸ್ ಪಕ್ಷಕ್ಕೆ ನನ್ನ ವಿನಮ್ರ ಮನವಿ ಏನೆಂದರೆ, ಪಕ್ಷಕ್ಕೆ ನನಗಿಂತ ಹೆಚ್ಚಾಗಿ ಪಕ್ಷದಲ್ಲಿ ಆಳವಾಗಿ ಬೇರೂರಿರುವ ರಚನಾತ್ಮಕ ಸಮಸ್ಯೆಗಳನ್ನು ಸುಧಾರಣೆ ಮಾಡಲು ನಾಯಕತ್ವ ಮತ್ತು ಸಾಮಾಹಿಕ ಇಚ್ಛಾಶಕ್ರಿಯ ಅಗತ್ಯವಿದೆ ಎಂದು ಹೇಳಿದ್ದಾರೆ.
I declined the generous offer of #congress to join the party as part of the EAG & take responsibility for the elections.
In my humble opinion, more than me the party needs leadership and collective will to fix the deep rooted structural problems through transformational reforms.
— Prashant Kishor (@PrashantKishor) April 26, 2022
ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು, ಕಾಂಗ್ರೆಸ್ ಪಕ್ಷ ಪ್ರಶಾಂತ್ ಕಿಶೋರ್ ಅವರಿಗೆ ಪಕ್ಷಕ್ಕೆ ಸೇರ್ಪಡೆಯಾಗುವ ಆಹ್ವಾನ ನೀಡಿತ್ತು. ಅಲ್ಲದೇ, ಮುಂದಿನ ಚುನಾವಣೆಯಲ್ಲಿ ಜವಾಬ್ದಾರಿ ಹೊತ್ತುಕೊಳ್ಳುವಂತೆ ಹೇಳಲಾಗಿತ್ತು. ಆದರೆ, ಹಲವು ಹಂತದ ಚರ್ಚೆಗಳ ನಂತರ ಪ್ರಶಾಂತ್ ಕಿಶೋರ್ ಈ ಆಹ್ವಾನವನ್ನು ತಿರಸ್ಕರಿಸಿದ್ದಾರೆ ಎಂದು ಹೇಳಿದ್ದಾರೆ.
Following a presentation & discussions with Sh. Prashant Kishor, Congress President has constituted a Empowered Action Group 2024 & invited him to join the party as part of the group with defined responsibility. He declined. We appreciate his efforts & suggestion given to party.
— Randeep Singh Surjewala (@rssurjewala) April 26, 2022
ಹಲವು ಹಂತದ ಚರ್ಚೆಗಳ ಬಳಿಕ ಕಾಂಗ್ರೆಸ್ನ ನಿಯೋಜಿತ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪ್ರಶಾಂತ್ ಕಿಶೋರ್ ನಡುವಿನ ಮಾತುಕತೆ ಮುರಿದುಬಿದ್ದಿತ್ತು. ಅಲ್ಲದೇ, ಪ್ರಶಾಂತ್ ಕಿಶೋರ್ ಅವರು ಮಮತಾ ಬ್ಯಾನರ್ಜಿ ಹಾಗೂ ಜಗನ ಮೋಹನ್ ರೆಡ್ಡಿಯವರೊಂದಿಗೆ ಹೊಂದಿರುವ ಸಂಬಂಧದ ಆಧಾರದ ಮೇಲೆ ಪಕ್ಷದಲ್ಲಿಯೇ ಪ್ರಶಾಂತ್ ಕಿಶೋರ್ ಸೇರ್ಪಡೆಗೆ ವಿರೋಧ ವ್ಯಕ್ತವಾಗಿತ್ತು ಎನ್ನಲಾಗಿದೆ.