ಯಾರದ್ದೋ ವೈಯಕ್ತಿಕ ಮಹತ್ವಾಕಾಂಕ್ಷೆಯ ಷಡ್ಯಂತ್ರಕ್ಕೆ ಬಿಜೆಪಿ ಸೋಲು – ಸಂಸದ ಪ್ರತಾಪ್​ ಸಿಂಹ ಹೇಳಿದ್ದು ಯಾರಿಗೆ..?

ಕರ್ನಾಟಕದಲ್ಲಿ ಬಿಜೆಪಿ ಹೀನಾಯವಾಗಿ ಸೋತಿದೆ, ಕಾಂಗ್ರೆಸ್​ ಪ್ರಚಂಡ ಜಯಗಳಿಸಿದೆ. ಫಲಿತಾಂಶ ಬಂದ 5 ದಿನಗಳ ಬಳಿಕ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್​ ಸಿಂಹ ಅವರು ಮಾಡಿರುವ ಟ್ವೀಟ್​ ಈಗ ಬಿಜೆಪಿಯಲ್ಲಿ ಚರ್ಚೆಗೆ ಗ್ರಾಸವಾಗಿದೆ.

ನಮ್ಮ ಪರವಾಗಿ ಮತ ಕೇಳುವ, ಮನೆ ಮಠ ಬಿಟ್ಟು ಪಕ್ಷಕ್ಕಾಗಿ ದುಡಿಯುವ ಹಾಗು ಗೆದ್ದಾಗ ಹೊತ್ತು ಮೆರೆಯುವ ಕಾರ್ಯಕರ್ತನಿಗೆ ಪಕ್ಷ ಸೋತಾಗ ನಮ್ಮ ಮೇಲೆ ಸಿಟ್ಟನ್ನು ತೀಕ್ಷ್ಣವಾಗಿ ಹೊರಹಾಕುವ ಹಕ್ಕೂ ಇರುತ್ತದೆ. ಪಕ್ಷ ಸೋತು ಅನಾಥವಾಗಿರುವುದು, ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತನೇ ಹೊರತು ಯಾವ ನಾಯಕನೂ ಅಲ್ಲ. ದಯವಿಟ್ಟು ನಮ್ಮನ್ನು ಕ್ಷಮಿಸಿ.

ಹಾಗೂ… ಯಾರದ್ದೋ ವೈಯ್ಯಕ್ತಿಕ ಮಹತ್ವಾಕಾಂಕ್ಷೆಯಿಂದ ಸೃಷ್ಟಿಯಾಗುವ ಷಡ್ಯಂತ್ರಕ್ಕೆ ಬಲಿಯಾಗುವುದು, ಯಾರ್ಯಾರನ್ನೋ ತೆಗಳುವುದು ಬೇಡ ಕಾರ್ಯಕರ್ತರೇ.

ಎಂದು ಎರಡು ಟ್ವೀಟ್​ಗಳನ್ನು ಮಾಡಿದ್ದಾರೆ. 

ಈ ಟ್ವೀಟ್​ನಲ್ಲಿ ಯಾರದ್ದೋ ವೈಯಕ್ತಿಕ ಮಹತ್ವಾಕಾಂಕ್ಷೆಯ ಷಡ್ಯಂತ್ರಕ್ಕೆ ಕರ್ನಾಟಕದಲ್ಲಿ ಬಿಜೆಪಿ ಸೋತಿದೆ ಎಂದು ಪ್ರತಾಪ್​ ಸಿಂಹ ಹೇಳಿರುವುದು ಯಾರ ಬಗ್ಗೆ..? ಎಂದು ಟ್ವಿಟ್ಟರ್​ನಲ್ಲಿ ಚರ್ಚೆ ಜೋರಾಗಿದೆ.