`ಪ್ರವೀಣ್​ ನೆಟ್ಟಾರು ಪತ್ನಿಗೆ ಪೇಪರ್​ ಚಾಕ್ಲೇಟ್​ ಕೊಟ್ಟು ಬಿಜೆಪಿ ದ್ರೋಹ’

ಕೊಲೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್​ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಬದುಕಿಗೆ ಶಾಶ್ವತ ದಾರಿ ತೋರಿಸದೆ ಇಂತಹ ಪೇಪರ್ ಚಾಕ್ಲೆಟ್ ನೀಡುವ ಮೂಲಕ ಬಿಜೆಪಿ ದ್ರೋಹವೆಸಗಿದೆ ಎಂದು ಕಾಂಗ್ರೆಸ್​ ವಾಗ್ದಾಳಿ ನಡೆಸಿದೆ.

ಭ್ರಷ್ಟಾಚಾರವೇ ಕುಲದೈವ ಎಂದು ನಂಬಿರುವ @BJP4Karnatakaಗೆ ನೀತಿ ನಿಯಮಗಳನ್ನು ಅಧ್ಯಯನ ಮಾಡಲು ಆಸಕ್ತಿ & ಸಮಯ ಇರಲು ಸಾಧ್ಯವೇ?

ನಿಯಮದ ಪ್ರಕಾರ ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ.

ಬದುಕಿಗೆ ಶಾಶ್ವತ ದಾರಿ ತೋರಿಸದೆ ಇಂತಹ ಪೇಪರ್ ಚಾಕ್ಲೆಟ್ ನೀಡುವ ಮೂಲಕ ಬಿಜೆಪಿ ಪ್ರವೀಣ್ ಪತ್ನಿಗೆ ದ್ರೋಹವೆಸಗಿದೆ.

ಎಂದು ಕಾಂಗ್ರೆಸ್​ ಬಿಜೆಪಿಗೆ ತಿರುಗೇಟು ನೀಡಿದೆ.

ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ:

ಕಾಂಗ್ರೆಸ್ ಪಕ್ಷವೇ ಸಾಕಿ‌ ಬೆಳೆಸಿದ ಪಿಎಫ್ಐ ಎಂಬ ಭಯೋತ್ಪಾದಕ ಸಂಘಟನೆಯ ಕೋಮು ದ್ವೇಷಕ್ಕೆ ಒಳಪಟ್ಟು, ಪಿಎಫ್‌ಐ ಗೂಂಡಾಗಳಿಂದ ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರು ಅವರ ಧರ್ಮಪತ್ನಿಗೆ ಜೀವನ ನಿರ್ವಹಣೆಗಾಗಿ ಅನುಕಂಪದ ಆಧಾರದಲ್ಲಿ ನಮ್ಮ ಸರ್ಕಾರ ಮಂಗಳೂರಿನ ಡಿ.ಸಿ. ಕಚೇರಿಯಲ್ಲಿ ಉದ್ಯೋಗ ಕಲ್ಪಿಸಿತ್ತು.

ಈಗ ಆಡಳಿತಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ತನ್ನ ದ್ವೇಷದ ರಾಜಕೀಯವನ್ನು ಮುಂದುವರೆಸಿರುವುದು ಖಂಡನೀಯ. ಈ ಕೂಡಲೇ ಸರ್ಕಾರ ಉದ್ಯೋಗದಿಂದ ವಜಾಮಾಡುವ ಅಮಾನವೀಯ ಆದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸುತ್ತೇವೆ.

ಪಿಎಫ್ಐ ಕೈಗೊಂಬೆಯಂತೆ ಸಿದ್ದರಾಮಯ್ಯರವರ ಸರಕಾರ ಕುಣಿಯುತ್ತಿರುವುದು ರಾಜ್ಯದ ದುರಂತ.

ಎಂದು ಬಿಜೆಪಿ ಟ್ವೀಟಿಸಿ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿತ್ತು.

ಪ್ರವೀಣ್​ ನೆಟ್ಟಾರು ಪತ್ನಿ ಉದ್ಯೋಗ ಕಳೆದುಕೊಂಡಿದ್ದು ಯಾಕೆ..? ಇಲ್ಲಿದೆ ಸಂಪೂರ್ಣ ಮಾಹಿತಿ: