ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : 32 ಕಡೆ ಎನ್​ಐಎ ದಾಳಿ

Praveen Nettaru

ದಕ್ಷಿಣ ಕನ್ನಡದ ಬೆಳ್ಳಾರೆಯ ಯುವ ಬಿಜೆಪಿ ಮುಖಂಡನಾಗಿದ್ದ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಇಂದು ಮಂಗಳವಾರ ಬೆಳಿಗ್ಗೆ 32 ಕಡೆ ದಾಳಿ ಮಾಡಿದೆ.

ಎನ್​ಐಎ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಕ್ಷಿಣ ಕನ್ನಡದ ಪುತ್ತೂರು ಮತ್ತು ಸುಳ್ಯದಲ್ಲಿ 32 ಕಡೆ ಮನೆ, ಕಟ್ಟಡಗಳ ಮೇಲೆ ದಾಳಿ ನಡೆಸಿ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ಬಗ್ಗೆ ವಿಚಾರಣೆ ನಡೆಸಿರುವುದಾಗಿ ತಿಳಿದುಬಂದಿದೆ.

ಎನ್.ಐ.ಎ.ಅಧಿಕಾರಿಗಳಿಗೆ ಕರ್ನಾಟಕ ಪೊಲೀಸರು ಸಾಥ್ ನೀಡಿದ್ದಾರೆ. 10ಕ್ಕೂ ಹೆಚ್ಚು ವಾಹನಗಳಲ್ಲಿ ಬಂದಿರುವ ಅಧಿಕಾರಿಗಳು, ಬೆಳಿಗ್ಗೆ 6 ಗಂಟೆಯಿಂದಲೇ ತನಿಖೆ ಆರಂಭಿಸಿದ್ದಾರೆ.

ರಾಜ್ಯ ಸರ್ಕಾರ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ (ಎನ್​ಐಎ)ಕ್ಕೆ ವಹಿಸಿದೆ.

ಇದನ್ನೂ ಓದಿ : BREAKING: ಪ್ರವೀಣ್​ ನೆಟ್ಟಾರು ಕೊಲೆ: ಮತ್ತೆ ಮೂವರು ಪ್ರಮುಖ ಆರೋಪಿಗಳ ಬಂಧನ

LEAVE A REPLY

Please enter your comment!
Please enter your name here