ರಾಜ್ಯ ಕಾಂಗ್ರೆಸ್ ಮುಂದಿನ ವರ್ಷ ಏಪ್ರಿಲ್ ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಚುನಾವಣೆ ಸಿದ್ಧತೆಯ ಭಾಗವಾಗಿ ಪ್ರಿಯಾಂಕ್ ಖರ್ಗೆಯವರಿಗೆ ಹೊಸ ಜವಾಬ್ದಾರಿ ನೀಡಲಾಗಿದೆ.
ಕಾಂಗ್ರೆಸ್ ನ ಸಂಘಟನೆ ಉಸ್ತುವಾರಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಶಾಸಕ ಪ್ರಿಯಾಂಕ್ ಖರ್ಗೆಯವರನ್ನು ಕೆಪಿಸಿಸಿ ಸೋಷಿಯಲ್ ಮೀಡಿಯಾ ಮತ್ತು ಸಂವಹನದ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.
ಅಲ್ಲದೆ, ಕೆಪಿಸಿಸಿಯ ವಾರ್ ರೂಂನ ಮುಖ್ಯಸ್ಥರನ್ನಾಗಿ ಶಶಿಕಾಂತ್ ಸೆಂತಿಲ್ ಮತ್ತು ಸುನಿಲ್ ಕಣುಗೋಲು ಅವರಿಗೆ ಒಟ್ಟಾರೆ ಉಸ್ತುವಾರಿಯನ್ನು ನೀಡಲಾಗಿದೆ.