ADVERTISEMENT
ಐದು ರಾಜ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹೊಸ ರಾಜ್ಯಪಾಲರನ್ನು ನೇಮಕ ಮಾಡಿದೆ.
ಮಾಜಿ ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರನ್ನು ಹಿಂಸಾಚಾರ ಪೀಡಿತ ಮಣಿಪುರ ರಾಜ್ಯದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಮಾಜಿ ಕೇಂದ್ರ ಸಚಿವ ಮತ್ತು ನಿವೃತ್ತ ಸೇನಾ ಮುಖ್ಯಸ್ಥ ಜನರಲ್ ವಿ ಕೆ ಸಿಂಗ್ ಅವರನ್ನು ಮಿಜೋರಾಂ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.
ಮಿಜೋರಾಂ ರಾಜ್ಯಪಾಲರಾಗಿದ್ದ ಡಾ ಹರಿಬಾಬು ಖಂಬಂಪಟಿ ಅವರನ್ನು ಒಡಿಶಾ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಒಡಿಶಾ ರಾಜ್ಯಪಾಲರಾಗಿದ್ದ ರಘುಬರ್ ದಾಸ್ ಅವರು ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪತಿ ಮುರ್ಮು ಅಂಗೀಕರಿಸಿದ್ದಾರೆ.
ಕೇರಳ ರಾಜ್ಯಪಾಲರಾಗಿದ್ದ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಬಿಹಾರ ರಾಜ್ಯಪಾಲರನ್ನಾಗಿ ವರ್ಗಾಯಿಸಲಾಗಿದೆ. ಬಿಹಾರ ರಾಜ್ಯಪಾಲರಾಗಿದ್ದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಕೇರಳ ರಾಜ್ಯಪಾಲರನ್ನಾಗಿ ವರ್ಗಾಯಿಸಲಾಗಿದೆ.
ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಆದೇಶಿಸಿದ್ದಾರೆ.
ADVERTISEMENT