ಇಂದು ರಾಷ್ಟ್ರಪತಿ ಚುನಾವಣೆ ನಡೆಯುತ್ತಿದೆ. ಬಿಜೆಪಿ ನೇತೃತ್ವದ ದ್ರೌಪದಿ ಮುರ್ಮು ಹಾಗೂ ಪ್ರತಿಪಕ್ಷಗಳ ಒಕ್ಕೂಟದ ಯಶವಂತ್ ಸಿನ್ಹಾ ನಡುವೆ ರಾಷ್ಟ್ರಪತಿ ಪದವಿಗಾಗಿ ಭರ್ಜರಿ ಪೈಪೋಟಿ ನಡೆಯುತ್ತಿದೆ.
ದೇಶಾದ್ಯಂತ ಚುನಾಯಿತ ಸಂಸದರು ಹಾಗೂ ಶಾಸಕರು ತಮ್ಮ ಮತ ಚಲಾವಣೆ ಮಾಡುತ್ತಿದ್ದಾರೆ. ಇಂದು ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಿದೆ. ಪ್ರಮುಖರಾದ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಮನ್ಮೋಹನ್ ಸಿಂಗ್ ಸೇರಿದಂತೆ ಹಲವು ಗಣ್ಯರು ರಾಷ್ಟ್ರಪತಿ ಚುನಾವಣೆಯಲ್ಲಿ ತಮ್ಮ ಮತ ಚಲಾಯಿಸಿದ್ದಾರೆ.
ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬಹುತೇಕ ಪ್ರಾದೇಶಿಕ ಪಕ್ಷಗಳು ಈಗಾಗಲೇ ಬಹಿರಂಗ ಬೆಂಬಲ ಘೋಷಣೆ ಮಾಡಿರುವುದರಿಂದ, ದ್ರೌಪದಿ ಮುರ್ಮು ಅವರೇ ಗೆಲುವು ಸಾಧಿಸುವ ಸಾಧ್ಯತೆ ಹೆಚ್ಚಿದೆ.
ರಾಷ್ಟ್ರಪತಿ ಚುನಾವಣೆಯಲ್ಲಿ ಪಕ್ಷಗಳು ತಮ್ಮ ಸಂಸದರಿ ಹಾಗೂ ಶಾಸಕರಿಗೆ ವಿಪ್ ಜಾರಿ ಮಾಡುವಂತಿಲ್ಲ. ಜುಲೈ 21 ರಂದು ಮತಗಳ ಎಣಿಕೆ ನಡೆಯಲಿದ್ದು, ನೂತನ ರಾಷ್ಟ್ರಪತಿಯಾಗಿ ಆಯ್ಕೆಯಾದವರು ಜುಲೈ 25 ರಂದು ನೂತನ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.