ADVERTISEMENT
ನವೆಂಬರ್ 1 ಅಂದರೆ ಇಂದಿನಿಂದ ಅಡುಗೆ ಅನಿಲದ ದರ ಏರಿಕೆ ಆಗಿದೆ. ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ ದರವನ್ನು 100 ರೂಪಾಯಿ ಏರಿಕೆ ಮಾಡಲಾಗಿದೆ.
ಪ್ರತಿ ತಿಂಗಳ ಮೊದಲ ದಿನ ಸಿಲಿಂಡರ್ ದರವನ್ನು ಪರಿಷ್ಕರಣೆ ಮಾಡಲಾಗುತ್ತಿರುವ ಹಿನ್ನೆಲೆಯಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ದರ ಹೆಚ್ಚಳವಾಗಿದೆ.
ಅಕ್ಟೋಬರ್ನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು 209 ರೂಪಾಯಿಯಷ್ಟು ಹೆಚ್ಚಳ ಮಾಡಲಾಗಿತ್ತು.
ಅಂದರೆ ಕೇವಲ 2 ತಿಂಗಳ ಅವಧಿಯಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ದರ 309 ರೂಪಾಯಿ ಹೆಚ್ಚಳವಾಗಿದೆ.
ಆದರೆ ಮನೆ ಬಳಕೆಯ ಅಡುಗೆ ಸಿಲಿಂಡರ್ ಬೆಲೆಯನ್ನು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಹೆಚ್ಚಳ ಮಾಡಿಲ್ಲ.
ADVERTISEMENT