ಕಾಂಗ್ರೆಸ್ ನಾಯಕಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.
`ನಾನು ಮನೆಯಲ್ಲಿ ಕ್ವಾರಂಟೈನ್ ಆಗಿದ್ದೇನೆ. ನನ್ನ ಜೊತೆಗೆ ಸಂಪರ್ಕದಲ್ಲಿದ್ದವರು ಅಗತ್ಯ ಎಚ್ಚರಿಕೆಯನ್ನು ಕೈಗೊಳ್ಳಿ’ ಎಂದು ಹೇಳಿದ್ದಾರೆ.
ನಿನ್ನೆಯಷ್ಟೇ ಕಾಂಗ್ರೆಸ್ ಅಧ್ಯಕ್ಷೆಯೂ ಆಗಿರುವ ಪ್ರಿಯಾಂಕ ಗಾಂಧಿ ತಾಯಿ ಸೋನಿಯಾ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರಿಗೆ ಕೋವಿಡ್ ದೃಢಪಟ್ಟಿತ್ತು.
ಜೂನ್ 8ರಂದು ಜಾರಿ ನಿರ್ದೇಶನಾಲಯದ ಎದುರು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಬೇಕಿದೆ. ಅವರು ನಿಗದಿಯಂತೆ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.