ಕಾಂಗ್ರೆಸ್ ನಾಯಕ, ಮಾಜಿ ಮಂತ್ರಿ ಪ್ರಿಯಾಂಕ್ ಖರ್ಗೆ ಅವರ ಟ್ವಿಟ್ಟರ್ ಖಾತೆ ಅವರ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಅವರು ಮಾಡಿದ ಟ್ವೀಟ್ ಗಳೆಲ್ಲ ಇದ್ದಕ್ಕಿದ್ದಂತೆ ಕಾಣುತ್ತಿಲ್ಲ. ಇದು ಟ್ವಿಟ್ಟರ್ ಸಂಸ್ಥೆಯಿಂದ ಆದ ಕ್ರಮವೋ? ಅಥವಾ ಹ್ಯಾಕರ್ ಗಳ ಕೃತ್ಯವೋ ಗೊತ್ತಾಗುತ್ತಿಲ್ಲ ಎಂದು ಪ್ರಿಯಾಂಕ್ ಖರ್ಗೆ ಪ್ರಕಟಣೆ ಹೊರಡಿಸಿದ್ದಾರೆ.
ಬಿಜೆಪಿ ಸರ್ಕಾರದ ಹಗರಣಗಳ ಬಗ್ಗೆ ಪ್ರಸ್ತಾಪಿಸಿ ವಾಗ್ದಾಳಿ ನಡೆಸುತ್ತಿದ್ದರು. ಬೆಳಗ್ಗೆಯಷ್ಟೇ PSI ಪರೀಕ್ಷಾ ಅಕ್ರಮದ ಬಗ್ಗೆ ಸರಣಿ ಟ್ವೀಟ್ ಮಾಡಿದ್ದರು. ADGP ಪಾತ್ರದ ಬಗ್ಗೆಯೂ ಶಂಕೆ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ಈ ಬೆಳವಣಿಗೆ ಆಗಿದೆ.
ಪ್ರಿಯಾಂಕ್ ಖರ್ಗೆ ಅವರ ಖಾತೆ ಅವರ ನಿಯಂತ್ರಣದಲ್ಲಿ ಇಲ್ಲದ ಕಾರಣ, ಅದರಿಂದ ಏನಾದರೂ ಅಸಂಬದ್ಧ ಸಂದೇಶ ಹೊರಬಿದ್ದರೆ ಅದು ನನ್ನದಾಗಿರುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಪ್ರಕಟಣೆ ಹೊರಡಿಸಿದ್ದಾರೆ.