ಪಿಎಸ್​ಐ ಅಕ್ರಮ ನೇಮಕಾತಿ ಪ್ರಕರಣ : ಎಂಟ್ರಿ ಕೊಟ್ಟ ಇಡಿ; ಆರೋಪಿತರಿಗೆ ಮತ್ತೊಂದು ಸಂಕಷ್ಟ

545 ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದೆ. ಆ ಮೂಲಕ, ಈ ಪ್ರಕರಣದಲ್ಲಿ ಆರೋಪಿಗಳಾಗಿರುವವರಿಗೆ ಮತ್ತೊಂದು ಸುತ್ತಿನ ಸಂಕಷ್ಟ ಎದುರಾಗಿದೆ.

ಪ್ರಕರಣದಲ್ಲಿ ಆರೋಪಿಗಳ ಹಣಕಾಸು ವ್ಯವಹಾರ ಕೋಟ್ಯಂತರ ರೂಪಾಯಿದ್ದು ಅಲ್ಲದೆ ಭ್ರಷ್ಚಾಚಾರ ಆಗಿದೆ ಎಂದು ಇಡಿಗೆ ಸಿಬಿಐ ಪತ್ರ ಬರೆದಿದೆ. ಈ ಹಿನ್ನೆಲೆಯಲ್ಲಿ ತನಿಖೆಗೆ ಮುಂದಾಗಿರುವ ಇಡಿ, ಆರೋಪಿಗಳ ವಿಚಾರಣೆಗೆ ಅನುಮತಿ ನೀಡುವಂತೆ ಬೆಂಗಳೂರು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೆ ಮನವಿ ಮಾಡಿಕೊಂಡಿದೆ.

ಇದನ್ನೂ ಒದಿ : PSI ಅಕ್ರಮ ನೇಮಕಾತಿ ಪ್ರಕರಣ : ಎಡಿಜಿಪಿ ಅಮೃತ್ ಪೌಲ್ ಬಂಧನ

ನೇಮಕಾತಿ ಹಗರಣದಲ್ಲಿ ಅಕ್ರಮವಾಗಿ ನೇಮಕಾತಿ ಆಗಿರುವ ಆರೋಪಿಗಳಿಂದ ತಲಾ 30 ಲಕ್ಷ ರೂ.ಗಳಿಂದ 1 ಕೋಟಿ ರೂ.ವರೆಗೂ ಹಣ ವಸೂಲಿ ಮಾಡಲಾಗಿದೆ ಎಂಬ ಸಂಗತಿ ಸಿಐಡಿ ತನಿಖೆಯಿಂದ ಹೊರಬಂದಿತ್ತು.

ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ ಸಹಾಯ ನಿರ್ದೇಶಕ ಶೈಲೇಂದ್ರ ಕುಮಾರ್ ಚೌಬೆ ಅವರು ಪ್ರಕರಣ ದಾಖಲಿಸಿಕೊಂಡು ಬಂಧಿತ ಆರೋಪಿಗಳ ಹೇಳಿಕೆ ದಾಖಲಿಸಿಕೊಳ್ಳಲು ಮುಂದಾಗಿದ್ದಾರೆ.

ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿವರೆಗೆ ಸುಮಾರು 96 ಜನರನ್ನು ಬಂಧಿಸಲಾಗಿದೆ. ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮೃತ್ ಪೌಲ್​ರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಇದನ್ನೂ ಓದಿ : PSI ಅಕ್ರಮ ಪರೀಕ್ಷೆ ಕೇಸ್ : ಮೊದಲ ರ್‍ಯಾಂಕ್ ಪಡೆದಿದ್ದ ರಚನಾ ಅರೆಸ್ಟ್

LEAVE A REPLY

Please enter your comment!
Please enter your name here