ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸರ್ಕಾರದ ಮರು ಪರೀಕ್ಷೆಯ ನಿರ್ಧಾರವನ್ನು ರದ್ದು ಪಡಿಸುವಂತೆ ಕೋರಿ 28 ಜನ ನೊಂದ ಪಿಎಸ್ಐ ಅಭ್ಯರ್ಥಿಗಳು ಕೆಎಟಿ(ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ)ಯ ಮೊರೆ ಹೋಗಿದ್ದಾರೆ.
ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಅಕ್ರಮ ಕಂಡು ಬಂದ ಹಿನ್ನೆಲೆಯಲ್ಲಿ ಸರ್ಕಾರ ಪಿಎಸ್ಐ ನೇಮಕಾತಿ ಪರೀಕ್ಷೆಯನ್ನು ರದ್ದು ಪಡಿಸಿತ್ತು. ಇದರಿಂದ ಪ್ರಾಮಾಣಿಕವಾಗಿ ಆಯ್ಕೆಯಾಗಿದ್ದ ವಿದ್ಯಾರ್ಥಿಗಳು ಹೋರಾಟ ಕೈಗೊಂಡಿದ್ದರು. ಕಾನೂನು ತಜ್ಞರ ಅಭಿಪ್ರಾಯ ಪಡೆದ ಬಳಿಕ ಬುಧವಾರ ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ ಮೊರೆ ಹೋಗಿದ್ದಾರೆ.
ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ. ಅಕ್ರಮ ಕುರಿತು ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಅಕ್ರಮದಲ್ಲಿ ಭಾಗಿಯಾಗಿರುವರನ್ನು ಬಂಧಿಸಿ ಕ್ರಮ ಜರುಗಿಸಲಿ. ಆದರೆ, ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿರುವ ನಮಗೆ ಪರೀಕ್ಷೆ ರದ್ದಾಗಿರುವ ಕಾರಣ ಅನ್ಯಾಯವಾಗಿದೆ. ಸರ್ಕಾರದ ಈ ನಿರ್ಧಾರವನ್ನು ರದ್ದು ಪಡಿಸುವಂತೆ ಕೋರಿ ಪಿಎಸ್ಐ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.
ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಚಿವ ಅಶ್ವತ್ಥ್ ನಾರಾಯನ್ ಅವರ ಕೈವಾಡವಿದೆ ಎಂದು ಕಾಂಗ್ರೆಸ್ ಆರೋಪಿಸಿದರೆ, ಕಮಲ್ ಪಂತ್ ಅವರಿಂದ ಈ ಪ್ರಕರಣ ಹೊರಗೆ ಬಂದಿದೆ ಎಂದು ಜೆಡಿಎಸ್ನ ಕುಮಾರಸ್ವಾಮಿಯವರು ಹೇಳಿದ್ದಾರೆ.
https://youtu.be/qPAnMTXlaac