ADVERTISEMENT
ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಪಿಎಸ್ಐ ನೇಮಕಾತಿ ಹಗರಣದ ತನಿಖೆಗೆ ಸಿಎಂ ಸಿದ್ದರಾಮಯ್ಯ ಸರ್ಕಾರ ನ್ಯಾಯಾಂಗ ಆಯೋಗವನ್ನು ರಚಿಸಿದೆ.
ಕರ್ನಾಟಕ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ತನಿಖಾ ಆಯೋಗ ರಚಿಸಿ ಸರ್ಕಾರ ಆದೇಶಿಸಿದೆ.
ಮೇ 31ರಂದು ವೀರಪ್ಪ ಅವರು ನಿವೃತ್ತರಾಗಿದ್ದರು. ಕರ್ನಾಟಕದಲ್ಲಿ ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ರಚನೆಯಾಗಿದ್ದ ಎಸಿಬಿಯನ್ನು ರದ್ದುಗೊಳಿಸಿ ಲೋಕಾಯುಕ್ತಕ್ಕೆ ಮತ್ತೆ ಶಕ್ತಿ ತುಂಬಿದ ಐತಿಹಾಸಿಕ ತೀರ್ಪು ನೀಡಿದ್ದರು.
ಮೂರು ತಿಂಗಳೊಳಗೆ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಆಯೋಗಕ್ಕೆ ಸೂಚಿಸಲಾಗಿದೆ.
2021ರ ಅಕ್ಟೋಬರ್ 3ರಂದು 545 ಪಿಎಸ್ಐ ಹುದ್ದೆಗಳಿಗೆ ನಡೆದಿದ್ದ ಹಗರಣದಲ್ಲಿ ವ್ಯಾಪಕ ಭ್ರಷ್ಟಾಚಾರದ ಹಿನ್ನೆಲೆಯಲ್ಲಿ ಸಿಐಡಿ ತನಿಖೆಗೆ ಈ ಹಿಂದೆ ಬಿಜೆಪಿ ಸರ್ಕಾರ ಆದೇಶಿಸಿತ್ತು.
ಈ ಹಗರಣದಲ್ಲಿ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್ ಪೌಲ್ ಅವರನ್ನು ಎಸ್ಐಟಿ ಬಂಧಿಸಿತ್ತು.
ನ್ಯಾಯಾಂಗ ಆಯೋಗಕ್ಕೆ ಅಗತ್ಯ ಸಹಕಾರ ನೀಡುವಂತೆ ಸಿಐಡಿ ಮತ್ತು ಪೊಲೀಸ್ ಅಧಿಕಾರಿಗಳಿಗೆ ಸರ್ಕಾರ ಸೂಚಿಸಿದೆ.
ADVERTISEMENT