ಜೂನ್ 18 ಶನಿವಾರದಂದು ಪಿಯುಸಿ ಫಲಿತಾಂಶ ಪ್ರಕಟಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಶುಭಾಶಯಗಳು ಎಂದು ಹೇಳಿದ್ದಾರೆ.
ಎಸ್ಎಸ್ಎಲ್ಸಿ ಫಲಿತಾಂಶವನ್ನು ಮೇ 19 ರಂದೇ ಬಿಡುಗಡೆ ಮಾಡಲಾಗಿತ್ತು. ಆದರೆ, ಪಿಯುಸಿ ಫಲಿತಾಂಶ ಬಿಡುಗಡೆಗೆ ಶಿಕ್ಷಣ ಇಲಾಖೆ ತಡಮಾಡಿದೆ. ಈಗಾಗಲೇ ಕಾಲೇಜು ಆರಂಭವಾಗಿದ್ದರೂ ಫಲಿತಾಂಶ ಬಿಡುಗಡೆ ಆಗಿರರಲಿಲ್ಲ. ಇದರಿಂದ, ವಿದ್ಯಾರ್ಥಿಗಳು ಅಸಮಾಧಾನಗೊಂಡಿದ್ದರು.
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ.
ವಿದ್ಯಾರ್ಥಿಗಳಿಗೆ ಶುಭಾಶಯಗಳು.
2nd PUC exam results will be announced tomorrow.
Best wishes to all students💐.
— B.C Nagesh (Modi Ya Parivara) (@BCNagesh_bjp) June 17, 2022
ಇದೀಗ, ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರೇ ಜೂನ್ 18 ರಂದು ಫಲಿತಾಂಶ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ. ಪಿಯುಸಿ ಮೌಲ್ಯಮಾಪನ ಸಮಯದಲ್ಲಿ ಎದುರಾದ ಸಮಸ್ಯೆಗಳೇ ಫಲಿತಾಂಶ ಪ್ರಕಟಣೆ ತಡವಾಗಲು ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.