ಪಂಜಾಬ್‌ನ ಪಟಿಯಾಲದಲ್ಲಿ ಎರಡು ಗುಂಪುಗಳ ನಡುವೆ ಶುಕ್ರವಾರ ಘರ್ಷಣೆ ನಡೆದಿದೆ.
ಘರ್ಷಣೆಯ ವೀಡಿಯೋ ವೈರಲ್ ಆಗಿದ್ದು, ಇದರಲ್ಲಿ ಎರಡು ಗುಂಪುಗಳು ಹೊಡೆದಾಟದಲ್ಲಿ ತೊಡಗಿರುವುದು ಕಂಡುಬಂದಿದೆ.ಅಲ್ಲದೇ, ಕಟ್ಟಡವೊಂದರ ಟೆರೇಸ್‌ನಿಂದ ವ್ಯಕ್ತಿಯೊಬ್ಬ ಕಲ್ಲು ತೂರಾಟ ನಡೆಸುತ್ತಿರುವುದು ದೃಶ್ಯಗಳಲ್ಲಿ ಸೆರೆಯಾಗಿದೆ.
ಘರ್ಷಣೆಯ ಸಂದರ್ಭದಲ್ಲಿ ಕೆಲವರು ಕತ್ತಿಗಳು ಮತ್ತು ಇತರೆ ಮಾರಕಾಸ್ತ್ರ, ಆಯುಧಗಳನ್ನು ಹಿಡಿದಿದ್ದಾರೆ. ಶಿವಸೇನಾ ನಡೆಸುತ್ತಿದ್ದ ಮೆರವಣಿಗೆ ಮೇಲೆ ಗುಂಪೊಂದು ದಾಳಿ ನಡೆಸಿರುವುದೇ ಈ ಘರ್ಷಣೆಗೆ ಕಾರಣವೆಂದು ತಿಳಿದುಬಂದಿದೆ.
ಘಟನೆ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ. ಅನುಮತಿ ಪಡೆಯದೇ ಮೆರವಣಿಗೆ ನಡೆಸಿದ ಶಿವಸೇನಾ ಸ್ಥಳೀಯ ಘಟಕದ ಅಧ್ಯಕ್ಷ ಹರೀಶ್ ಸಿಂಗ್ಲಾ ಅವರೊಂದಿಗೆ ಮಾತನಾಡುತ್ತಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.
#WATCH | Punjab: A clash broke out between two groups near Kali Devi Mandir in Patiala today.
Police personnel deployed at the spot to maintain law and order situation. pic.twitter.com/yZv2vfAiT6
— ANI (@ANI) April 29, 2022