ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ಸುನಿಲ್ ಜಾಖರ್ ಶನಿವಾರ ಪಕ್ಷ ತೊರೆದಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಗುಡ್ ಲಕ್ ಅಂಡ್ ಗುಡ್ ಬೈ’ ಎಂದು ಫೇಸ್ ಬುಕ್ ಲೈವ್ ವೀಡಿಯೋದಲ್ಲಿ ಹೇಳಿದ್ದಾರೆ.
ರಾಜಸ್ಥಾನದ ಉದಯಪುರದಲ್ಲಿ ಮೂರು ದಿನಗಳ ಕಾಂಗ್ರೆಸ್ ಚಿಂತನಾ ಶಿಬಿರ ನಡೆಯುತ್ತಿರುವ ವೇಳೆಯಲ್ಲಿಯೇ ಅತೃಪ್ತ ಮುಖಂಡ ಜಾಖರ್ ಪಕ್ಷವನ್ನು ತೊರೆಯುವ ನಿರ್ಧಾರ ಪ್ರಕಟಿಸಿದ್ದಾರೆ.
ಶೋಕಾಸ್ ನೋಟಿಸ್ ನೀಡಿದ್ದಕ್ಕಾಗಿ ಪಕ್ಷದ ವಿರುದ್ಧ ಸುನಿಲ್ ಜಾಖರ್ ಅಸಮಾಧಾನಗೊಂಡಿದ್ದರು. ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಕಾಂಗ್ರೆಸ್ ಕಳೆದ ತಿಂಗಳು ಅವರನ್ನು ಪಕ್ಷದ ಎಲ್ಲಾ ಸ್ಥಾನಗಳಿಂದ ತೆಗೆದುಹಾಕಿತ್ತು.