ಪಂಜಾಬ್ನ ಬಟಿಂಡಾ ಜಿಲ್ಲೆಯ ತಲವಂಡಿ ಸಾಬೋ ಉಪವಿಭಾಗದ ರಾಮಮಂಡಿಯಲ್ಲಿ ಕೆಲ ಕಿಡಿಗೇಡಿಗಳು ಮಹಾತ್ಮ ಗಾಂಧಿಯ ಪ್ರತಿಮೆಯನ್ನು ಧ್ವಂಸ ಮಾಡಿ ವಿಕೃತಿ ಮೆರೆದಿದ್ದಾರೆ.
ರಾಮಮಂಡಿಯ ಸಾರ್ವಜನಿಕ ಉದ್ಯಾನವನದಲ್ಲಿದ್ದ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿತ್ತು. ಆದರೆ, ಯಾರೋ ಕಿಡಿಗೇಡಿಗಳು ಮೂರ್ತಿಯನ್ನು ಬುಡಸಮೇತ ಹೊಡೆದು ಹಾಕಿದ್ದಾರೆ.
ವಿಷಯ ಬೆಳಕಿಗೆ ಬಂದ ಬಳಿಕ ಅಲ್ಲಿನ ನಿವಾಸಿಗಳು ಪ್ರತಿಭಟನೆ ನಡೆಸಿ, ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಪ್ರತಿಮೆ ಧ್ವಂಸ ಮಾಡಿದ ಕಾರಣದ ಬಗ್ಗೆ ತಿಳಿದು ಬಂದಿಲ್ಲ.
ಈ ಬಗ್ಗೆ ರಾಮಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಲ ದಿನಗಳ ಹಿಂದಷ್ಟೇ ಕೆನಡಾದ ಟೊರೊಂಟೋದಲ್ಲಿ ರಾಷ್ಟ್ರಪಿತನ ಮೂರ್ತಿಯನ್ನು ಧ್ವಂಸ ಮಾಡಿದ ಘಟನೆ ನಡೆದಿತ್ತು.