ರಾಜ್ಯ ಸರ್ಕಾರ ಈಗಾಗಲೇ 3,500 ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಬೆನ್ನಲ್ಲೇ, ಮತ್ತೆ 5 ಸಾವಿರ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Minister Araga Jnanendra) ಹೇಳಿದ್ದಾರೆ.
ವಿಧಾನಸಭೆಯಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದ ಪ್ರಶ್ನೋತ್ತರ ಕಲಾಪದಲ್ಲಿ ಗೃಹ ಮಂತ್ರಿ ಆರಗ ಜ್ಞಾನೇಂದ್ರ (Minister Araga Jnanendra) ಈ ಮಾಹಿತಿ ನೀಡಿದ್ದಾರೆ.
ಹಾಸನದ ಬಿಜೆಪಿ ಶಾಸಕ ಪ್ರೀತಂಗೌಡ ಪೊಲೀಸ್ ಕಾನ್ಸ್ಟೇಬಲ್ ನೇಮಕಾಥಿ ಬಗ್ಗೆ ಪ್ರರ್ಶನೆ ಮಾಡಿದ್ದರು. ಈ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ರಾಜ್ಯದಲ್ಲಿ 9,432 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇವೆ. ಈಗ 3,500 ಕಾನ್ಸ್ಟೇಬಲ್ ನೇಮಕಕ್ಕೆ ಅಧಿಸೂಚನೆ ಆಗಿದೆ. ಶೀಘ್ರವೇ ಮತ್ತೆ 5 ಸಾವಿರ ಕಾನ್ಸ್ಟೇಬಲ್ಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುತ್ತೆ ಎಂದು ಹೇಳಿದ್ದಾರೆ. ಇದನ್ನೂ ಓದಿ : 3,064 ಪೊಲೀಸ್ ಹುದ್ದೆಗಳ ನೇಮಕಾತಿಗೆ ಆದೇಶ – ವೇತನ, ವಯೋಮಿತಿ, ಪರೀಕ್ಷೆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ