BREAKING: ಅನರ್ಹಗೊಳ್ತಾರಾ ಸಂಸದ ರಾಹುಲ್​ ಗಾಂಧಿ..? ಚುನಾವಣೆಗೆ ನಿಲ್ಲಲೂ ನಿರ್ಬಂಧನಾ..?

ಕ್ರಿಮಿನಲ್​ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಲೋಕಸಭಾ ಸದಸ್ಯತ್ವ ಕಳೆದುಕೊಳ್ಳಲಿದ್ದಾರಾ..?

ಜನಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್​ 8ರ ಉಪ ಕಲಂ 3ರ ಅಡಿಯಲ್ಲಿ

2 ವರ್ಷ ಅಥವಾ ಅದಕ್ಕಿಂತ ಹೆಚ್ಚು ವರ್ಷ ಜೈಲು ಶಿಕ್ಷೆಗೆ ಒಳಗಾದ ಶಾಸಕ ಅಥವಾ ಸಂಸದರನ್ನು ಸದಸ್ಯತ್ವದಿಂದ ಅನರ್ಹಗೊಳಿಸಬಹುದು. ಜೈಲು ಶಿಕ್ಷೆ ಪೂರೈಸಿ ಬಿಡುಗಡೆ ಆದ ಬಳಿಕ ಮುಂದಿನ 6 ವರ್ಷಗಳವರೆಗೆ ಚುನಾವಣೆಗೆ ನಿಲ್ಲದಂತೆ ನಿರ್ಬಂಧ ಹೇರಬಹುದು.

ಕ್ರಿಮಿನಲ್​ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್​ ರಾಜ್ಯದ ಸೂರತ್​ ಜಿಲ್ಲಾ ನ್ಯಾಯಾಲಯ ರಾಹುಲ್​ ಅವರಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಈಗಾಗಲೇ ರಾಹುಲ್​ ಗಾಂಧಿ ಅವರನ್ನು ಲೋಕಸಭೆಯಿಂದ ಅಮಾನತು ಮಾಡುವಂತೆ ಲೋಕಸಭಾ ಸ್ಪೀಕರ್​ ಓಂ ಬಿರ್ಲಾಗೆ ಬಿಜೆಪಿ ಮನವಿ ಮಾಡಿದೆ.

ಲಂಡನ್​ನಲ್ಲಿ ರಾಹುಲ್​ ಗಾಂಧಿ ಭಾರತ ವಿರೋಧಿ ಹೇಳಿಕೆ ನೀಡಿದ್ದಾರೆ ಮತ್ತು ಆ ಹಿನ್ನೆಲೆಯಲ್ಲಿ ರಾಹುಲ್​ ಅವರನ್ನು ಸಂಸತ್ತಿನಿಂದ ಅಮಾನತು ಮಾಡಬಹುದೇ ಎಂಬ ತನಿಖೆ ನಡೆಸಲು ಸಮಿತಿ ರಚಿಸುವಂತೆ ಸ್ಪೀಕರ್​ಗೆ ಬಿಜೆಪಿ ಮನವಿ ಮಾಡಿತ್ತು.