ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ನಾಯಕ ನಾಯಕ ರಾಹುಲ್ ಗಾಂಧಿ ಗೆಲುವು ಸಾಧಿಸಿದ್ದಾರೆ.
4 ಲಕ್ಷ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ದಿನೇಶ್ ಪ್ರತಾಪ್ ಸಿಂಗ್ ವಿರುದ್ಧ ಭರ್ಜರಿ ಜಯಭೇರಿ ಬಾರಿಸಿದ್ದಾರೆ.
ಇನ್ನು ರಾಹುಲ್ ಗಾಂಧಿ,ಇದೇ ರಾಯ್ ಬರೇಲಿಯಲ್ಲಿ 2019ರ ಲೋಕಸಭೆ ಚುನಾವಣೆಯಲ್ಲಿ ತಮ್ಮ ತಾಯಿ ಸೋನಿಯಾ ಗಾಂಧಿಯವರು 2019 ರಲ್ಲಿ ಗಳಿಸಿದ ಗೆಲುವಿನ ಅಂತರವನ್ನು ಮೀರಿಸಿದ್ದಾರೆ.
2004 ರಿಂದ ಈ ಸ್ಥಾನದಲ್ಲಿ ಗೆದ್ದಿದ್ದ ಸೋನಿಯಾ ಗಾಂಧಿ, 2019 ರಲ್ಲಿ ಸಿಂಗ್ ವಿರುದ್ಧ 1.67 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. ಈ ಬಾರಿಯ ಲೋಕಸಭೆ ಚುನಾವಣೆಯಿಂದ ಸೋನಿಯಾ ಹೊರಗುಳಿದಿದ್ದರಿಂದ ರಾಯ್ ಬರೇಲಿಯಿಂದ ಕಾಂಗ್ರೆಸ್ ರಾಹುಲ್ ಗಾಂಧಿ ಅವರನ್ನು ಕಣಕ್ಕಿಳಿಸಿತ್ತು.
ಇನ್ನು ಕೇರಳದ ವಯಾನಾಡ್ ಲೋಕಸಭಾ ಕ್ಷೇತ್ರದಿಂದಲೂ ಸ್ಪರ್ಧಿಸಿರುವ ರಾಹುಲ್ ಗಾಂಧಿ, ಸಿಪಿಎಂ ಅಭ್ಯರ್ಥಿ ಅನ್ನಿ ರಾಜಾ ಎದುರು 3 ಲಕ್ಷಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.