ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಯ್ಬರೇಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.
ಅಮೇಥಿ ಮತ್ತು ರಾಯ್ಬರೇಲಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
ಅಮೇಥಿಯಿಂದ ನೆಹರು ಕುಟುಂಬದ ಆಪ್ತ ಕಿಶೋರಿ ಲಾಲ್ ಶರ್ಮಾ ಅವರಿಗೆ ಟಿಕೆಟ್ ನೀಡಲಾಗಿದೆ.
ಅಮೇಥಿಯಲ್ಲಿ ಈಗಾಗಲೇ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಬಿಜೆಪಿ ಮತ್ತೆ ಟಿಕೆಟ್ ನೀಡಿದೆ.
2019ರಲ್ಲಿ ಅಮೇಥಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಗಾಂಧಿ ಸೋತಿದ್ದರು.
ರಾಯ್ಬರೇಲಿಯಲ್ಲಿ ಇಲ್ಲಿವರೆಗೆ ಸೋನಿಯಾ ಗಾಂಧಿ ಸಂಸದೆಯಾಗಿದ್ದರು. ಅವರು ರಾಜಸ್ಥಾನ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಆ ಕ್ಷೇತ್ರದಲ್ಲಿ ರಾಹುಲ್ ಸ್ಪರ್ಧೆ ಮಾಡ್ತಿದ್ದಾರೆ.
ಈ ಮೂಲಕ ಈ ಬಾರಿಯೂ ವಯನಾಡು ಮತ್ತು ರಾಯ್ಬರೇಲಿ ಎರಡು ಕ್ಷೇತ್ರಗಳಲ್ಲಿ ರಾಹುಲ್ ಗಾಂಧಿ ಸ್ಪರ್ಧೆ ಮಾಡ್ತಿದ್ದಾರೆ.
ರಾಯ್ಬರೇಲಿಯಿಂದ ಸ್ಪರ್ಧೆ ಮಾಡುವುದಕ್ಕೆ ಪ್ರಿಯಾಂಕ ಗಾಂಧಿ ಒಪ್ಪಿಕೊಂಡಿಲ್ಲ.
ಇದುವರೆಗೆ ರಾಯಬರೇಲಿ ಮತ್ತು ಅಮೇಥಿಯಲ್ಲಿ ಕಾಂಗ್ರೆಸ್ ಕೇವಲ ಮೂರು ಬಾರಿ ಸೋತಿದೆಯಷ್ಟೇ. 1977ರಲ್ಲಿ ತುರ್ತು ಪರಿಸ್ಥಿತಿ ಬಳಿಕ ಇಂದಿರಾ ಗಾಂಧಿ ವಿರುದ್ಧ ರಾಜ್ ನಾರಾಯಣ್ ಗೆದ್ದಿದ್ದರು. ಇದಾದ ಬಳಿಕ 1996 ಮತ್ತು 1998ರಲ್ಲಿ ಕಾಂಗ್ರೆಸ್ ಸೋತಿತ್ತು. ಅಮೇಥಿಯಲ್ಲೂ 1977, 1998 ಮತ್ತು 2019ರಲ್ಲಿ ಕಾಂಗ್ರೆಸ್ ಸೋತಿತ್ತು.
ADVERTISEMENT
ADVERTISEMENT