ಕಳೆದ ಕೆಲ ದಿನಗಳಿಂದ ರಾಜ್ಯದ ಬಹುತೇಕ ಕಡೆ ಮಳೆಯ ಆರ್ಭಟ ಕೊಂಚ ಕಡಿಮೆಯಾಗಿದೆ. ಆದರೆ, ಜುಲೈ 27ರಿಂದ ಕರ್ನಾಟಕದಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಎಲ್ಲ ಜಿಲ್ಲೆಗಳು, ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಬೆಂಗಳೂರು, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ದಾವಣಗೆರೆ, ಮೈಸೂರು ಭಾಗದಲ್ಲಿ ಮಳೆಯಾಗಲಿದೆ. ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆ ಹೆಚ್ಚಳವಾಗುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಲ್ಲಿ ಇಂದು ಸಹ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಯಲ್ಲಿ ಮಳೆಯಾಗಲಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ದಾವಣಗೆರೆ, ಮೈಸೂರು ಭಾಗದಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮುಂತಾದ ಕಡೆಗಳಲ್ಲಿ ಮೋಡ ಮುಸುಕಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗಲಿದೆ.