ಇನ್ನು ಮೂರು ಗಂಟೆಯಲ್ಲಿ ಈ ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ

ಇನ್ನು ಮೂರು ಗಂಟೆಯಲ್ಲಿ ರಾಜ್ಯದ ಈ ಕೆಳಗಿನ ಜಿಲ್ಲೆಗಳಲ್ಲಿ ಮಳೆಯಾಗಬಹುದು ಎಂದು ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ಸೂಚನೆ ನೀಡಿದೆ. 
ಕಲ್ಬುರ್ಗಿ, ಗದಗ, ಹಾವೇರಿ, ಚಾಮರಾಜನಗರ, ಕೊಡಗು, ಮೈಸೂರು, ತುಮಕೂರು, ಹಾಸನ, ಚಿಕ್ಕಮಗಳೂರು, ರಾಮನಗರ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆ ಹಾಗೂ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾಧ್ಯತೆಯಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆ ಹಾಗೂ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾಧ್ಯತೆಯಿದೆ
ಎಂದು ಮುನ್ಸೂಚನೆ ನೀಡಲಾಗಿದೆ.