ಕರ್ನಾಟಕದಲ್ಲಿ ಬಿಸಿಲ ಬೇಗೆ – ಇತ್ತ ಅಲ್ಲಲ್ಲಿ ಮಳೆ ಬರುವ ಎಚ್ಚರಿಕೆ

Rain Forecost

ಬಿಸಿಲ ಬೇಗೆಯ ನಡುವೆ ಕರ್ನಾಟಕದಲ್ಲಿ ಇವತ್ತು ಅಲ್ಲಲ್ಲಿ ಮಳೆಯಾಗಿದೆ. ಹವಾಮಾನ ಇಲಾಖೆಯ ವರದಿ ಪ್ರಕಾರ ರಾಜ್ಯದ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ.

ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಂಭವಿಸುವ ಸಾಧ್ಯತೆಯಿದೆ.

ಮೈಸೂರು, ಚಾಮರಾಜನಗರ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು-ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಕನ್ನಡ, ಬೆಳಗಾವಿ, ದಕ್ಷಿಣ ಕನ್ನಡ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು-ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ

ಎಂದು ಹವಾಮಾನ ಇಲಾಖೆ ಹೇಳಿದೆ.

ಇವತ್ತು ಬೆಳಗ್ಗೆ 8.30AM ರಿಂದ ಸಂಜೆ 4.30PM ರವರೆಗೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ತೋಟದೂರಿನಲ್ಲಿ ಅತ್ಯಧಿಕ 50.5ಮಿಮೀ ಮಳೆಯಾಗಿದೆ.

LEAVE A REPLY

Please enter your comment!
Please enter your name here