ನಟಿ ಶಿಲ್ಪಾ ಶೆಟ್ಟಿ ಪತಿ ಮತ್ತು ಉದ್ಯಮಿ ರಾಜ್ಕುಂದ್ರಾನನ್ನು ಅರೆಸ್ಟ್ ಮಾಡಲಾಗಿದೆ. ಅಶ್ಲೀಲ ಸಿನಿಮಾಗಳನ್ನು (ಸೆಕ್ಸ್ ಸಿನಿಮಾಗಳು) ತಯಾರಿಸಿ ಅವುಗಳನ್ನು ಆಪ್ಗಳ ಮೂಲಕ ಮಾರಾಟ ಮಾಡುತ್ತಿದ್ದ ಆರೋಪದಡಿ ಬಂಧಿಸಲಾಗಿದೆ. ಈ ಬಗ್ಗೆ ಮುಂಬೈ ಪೊಲೀಸರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಅಶ್ಲೀಲ ಸಿನಿಮಾಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಬಗ್ಗೆ ಇದೇ ವರ್ಷದ ಫೆಬ್ರವರಿಯಲ್ಲಿ ಕೇಸ್ ದಾಖಲಾಗಿತ್ತು. ಇದರ ಹಿಂದಿನ ಮುಖ್ಯ ಸೂತ್ರಧಾರ ರಾಜ್ಕುಂದ್ರಾ ಎಂದು ಪೊಲೀಸರು ಮುಂಬೈ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.