ಸಿಗದ ನ್ಯಾಯ : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಸಾಲು ಮರದ ವೀರಾಚಾರಿ ಆತ್ಮಹತ್ಯೆ

Mitlakatte meerachari

ಪರಿಸರ ಪ್ರೇಮಿ, ಸಾಲು ಮರ ನೆಟ್ಟು ಬೆಳೆಸಿದ ವೃಕ್ಷಪ್ರೇಮಿ, ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಮಿಟ್ಲಕಟ್ಟೆ ವೀರಾಚಾರಿ (Mitlakatte Veerachari) ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ.

ಸಾಲುಮರದ ವೀರಾಚಾರಿ ಎಂದೇ ಪ್ರಸಿದ್ಧರಾಗಿರುವ ಇವರು ನ್ಯಾಯಬೆಲೆ ಅಂಗಡಿಯ ಅಕ್ರಮದ ವಿರುದ್ಧ ಹೋರಾಡುತ್ತಿದ್ದರು. ಆದರೆ, ನ್ಯಾಯ ಸಿಗದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸುಮಾರು 3000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿದ್ದ ವೀರಾಚಾರಿ (Mitlakatte Veerachari) ದಾವಣಗೆರೆ ಜಿಲ್ಲೆಯಲ್ಲಿ ಚಿರಪರಿಚಿತರಾಗಿದ್ದರು. ಸಾಲುಮರಗಳನ್ನು ಬೆಳೆಸಿದ್ದ ಈ ಪರಿಸರಪ್ರೇಮಿಗೆ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿತ್ತು.

ಇದನ್ನೂ ಓದಿ : ಜಮೀನು ವಿವಾದ : ಒಂದೇ ಸೀರೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

ಅವರು ಇತ್ತೀಚೆಗೆ ಮಿಟ್ಲಕಟ್ಟೆ ಗ್ರಾಮದಲ್ಲಿ ನಡೆಯುತ್ತಿದ್ದ ನ್ಯಾಯಬೆಲೆ ಅಂಗಡಿ ಅಕ್ರಮದ ವಿರುದ್ಧ ಹೋರಾಟ ಮಾಡುತ್ತಿದ್ದರು. ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಬಡವರಿಗೆ ಸೂಕ್ತವಾಗಿ ಅಕ್ಕಿ ವಿತರಣೆಯಾಗುತ್ತಿಲ್ಲ ಎಂದು ಅಕ್ರಮದ ವಿರುದ್ಧ ನಿರಂತರವಾಗಿ ಹೋರಾಟ ನಡೆಸುತ್ತಿದ್ದರು.

ನಿನ್ನೆ ಸೋಮವಾರ ಇದೇ ವಿಚಾರವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನ್ಯಾಯಬೆಲೆ ಅಂಗಡಿ ರದ್ದು ಮಾಡಬೇಕೇ, ಬೇಡವೇ ಎಂಬ ಬಗ್ಗೆ ಚರ್ಚೆ ನಡೆದಿತ್ತು. ನ್ಯಾಯಾಲಯದಲ್ಲಿ ನ್ಯಾಯ ಸಿಗದಿದ್ದರೆ ನೇಣಿಗೆ ಶರಣಾಗುತ್ತೇನೆ ಎಂದು ಅವರು ಹೇಳಿದ್ದರು. ತಮ್ಮ ಮಾತಿನಂತೆಯೇ ನಿನ್ನೆ ರಾತ್ರಿ 2 ಗಂಟೆಗೆ ಅವರು ನೇಣು ಹಾಕಿಕೊಂಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ : Actress Deepa : ಯುವ ನಟಿ ದೀಪ ಆತ್ಮಹತ್ಯೆ

LEAVE A REPLY

Please enter your comment!
Please enter your name here