ರಾಮನಗರ : ಗೋಡೆ ಕುಸಿದು ಇಬ್ಬರು ಮಕ್ಕಳು ಸಾವು

ನಿರಂತರ ಮಳೆಗೆ ಕೊಟ್ಟಿಗೆ ಗೋಡೆ ಕುಸಿದಿದ್ದು, ಪಕ್ಕದಲ್ಲೇ ಮಲಗಿಕೊಂಡಿದ್ದ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪರ್ಭಿನ್(4), ಇಷಿಕಾ(3) ಮೃತ ದುರ್ದೈವಿಗಳು. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೋಲೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶೆಡ್‍ನಲ್ಲಿ ಮಲಗಿದ್ದ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಾಯವಾಗಿದೆ.

ನೇಪಾಳ ಮೂಲದ ಕುಟುಂಬವೊಂದು ದನದ ಕೊಟ್ಟಿಗೆ ಪಕ್ಕದಲ್ಲೇ ಶೆಡ್ ನಿರ್ಮಿಸಿಕೊಂಡು ವಾಸವಾಗಿತ್ತು. ಹೋಟೆಲ್ ಒಂದರಲ್ಲಿ ಇವರು ಕೆಲಸ ಮಾಡುತ್ತಿದ್ದರು. ನಿರಂತರ ಮಳೆ ಬರುತ್ತಿದ್ದ ಹಿನ್ನೆಲೆ ಶೆಡ್ ಮೇಲೆ ಏಕಾಏಕಿ ಕೊಟ್ಟಿಗೆ ಗೋಡೆ ಕುಸಿದೆ. ಈ ಹಿನ್ನೆಲೆ ಸ್ಥಳದಲ್ಲೇ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಮೀನಾ ಬಿತ್ತು ಮತ್ತು ಮೋನಿಷಾರಿಗೆ ಗಾಯವಾಗಿದೆ.

ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಸ್ತುತ ಗಾಯಾಳುಗಳಿಗೆ ಮಾಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

LEAVE A REPLY

Please enter your comment!
Please enter your name here