ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಪ್ತ ಹಾಗೂ ಪಿಎಸ್ಐ ಹೆಸರು ಡೆತ್ನೋಟ್ನಲ್ಲಿ ಬರೆದಿಟ್ಟು ಸಾವಿಯೋ ಪಿಳೈ (Saviyo Pillai) ಎನ್ನುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಳಗಾವಿ ತಾಲೂಕಿನ ಮಚ್ಚೆಯ ನೆಹರು ನಗರದ ನಿವಾಸಿ ಸಾವಿಯೋ ಪಿಳೈ(28) (Saviyo Pillai) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಕ್ಯಾಂಪ್ ಠಾಣೆಯ ಪಿಎಸ್ಐ, ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಕಿರುಕುಳ ನೀಡಿರುವುದಾಗಿ ಡೆತ್ನೋಟ್ನಲ್ಲಿ ಆರೋಪಿಸಲಾಗಿದೆ.
ಇದನ್ನೂ ಓದಿ : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಕೇಸ್: ಅರ್ಜಿಯ ವಿಚಾರಣೆ ಏಕ ಸದಸ್ಯ ಪೀಠಕ್ಕೆ ವರ್ಗಾವಣೆ
ಕ್ಯಾಂಪ್ ಠಾಣಾ ವ್ಯಾಪ್ತಿಯ ಮಹಿಳೆಯೊಬ್ಬರ ಜೊತೆ ಸಾವಿಯೋ ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗಿದ್ದು, ಇಬ್ಬರ ಮಧ್ಯೆ ಮನಸ್ತಾಪವಾಗಿ ಈ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು.
ಬಿಜೆಪಿ ಮುಖಂಡ ಪೃಥ್ವಿ ಸಿಂಗ್, ಪಿಎಸ್ಐ ಸೇರಿ 1.50 ಲಕ್ಷ ರೂ. ಹಣ ಪಡೆದಿದ್ದರು. ಅಲ್ಲದೇ ಇನ್ನೂ ಹೆಚ್ಚು ಹಣ ನೀಡುವಂತೆ ಕಿರುಕುಳ ನೀಡಿದ್ದರು ಎಂದು ಆರೋಪಿಸಿ ಸಾವಿಯೋ ಪಿಳೈ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ : BREAKING: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ – ಮಾಜಿ ಸಚಿವ ಈಶ್ವರಪ್ಪಗೆ ಪೊಲೀಸರ ಕ್ಲೀನ್ಚಿಟ್