ADVERTISEMENT
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಪಾಲ್ಗೊಂಡಿದ್ದ ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದು ಈಗ ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.
ಸುರ್ಜೆವಾಲಾ ನಡೆಸಿರುವ ಸಭೆಯ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಪ್ರಶ್ನೆ ಎತ್ತಿವೆ.
ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ನಲ್ಲಿ ನಡೆದಿರುವ ಸಭೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿಕ ಶಿವಕುಮಾರ್, ವಸತಿ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಜಮೀರ್ ಅಹ್ಮದ್, ಇಂಧನ ಸಚಿವ ಕೆ ಜೆ ಜಾರ್ಜ್ ಮತ್ತು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಭಾಗವಹಿಸಿದ್ದರು.
ಪಕ್ಷದ ಸಚಿವರು ಮತ್ತು ಶಾಸಕರ ಜೊತೆಗೆ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಸಭೆ ನಡೆಸಿದ್ದು ಪ್ರಶ್ನೆಯಲ್ಲ.
ಬದಲಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯಕ್ತ ತುಷಾರ್ ಗಿರಿನಾಥ್ ಹೇಗೆ ಭಾಗವಹಿಸಿದರು ಎಂಬುದು ಪ್ರಶ್ನೆ.
ಜೊತೆಗೆ ಪಕ್ಷಕ್ಕಷ್ಟೇ ಸೀಮಿತಗೊಳ್ಳಬೇಕಿದ್ದ ಸುರ್ಜೆವಾಲಾ ಅವರು ಕರ್ನಾಟಕದಲ್ಲಿ ಹೇಗೆ ಆಡಳಿತಾತ್ಮಕ ವಿಷಯದಲ್ಲಿ ಹೇಗೆ ಮಧ್ಯಪ್ರವೇಶಿಸ್ತಾರೆ..? ಅವರು ಕರ್ನಾಟಕದಿಂದ ಆಯ್ಕೆ ಆದ ಜನಪ್ರತಿನಿಧಿಯಲ್ಲ. ಅವರಿಗೆ ಕರ್ನಾಟಕದ ಆಡಳಿತಾತ್ಮಕ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ಅಧಿಕಾರ ಇಲ್ಲ. ಹೀಗಿರುವಾಗ ಸುರ್ಜೆವಾಲ ಕರ್ನಾಟಕದ ಐಎಎಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದು ಹೇಗೆ..? ಎಂಬುದೇ ಪ್ರಶ್ನೆ.
ADVERTISEMENT